

ಹುಬ್ಬಳ್ಳಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ನೀಡುವ "ಚುಟುಕು ಚಿನ್ಮಯಿ' ಗೌರವ ಪ್ರಶಸ್ತಿಗೆ ಹಿರಿಯ ಶಿಕ್ಷಣ ತಜ್ಞ ಡಾ. ಶರಣಪ್ಪ ಕೊಟಗಿ ಮತ್ತು ಜಾನಪದ ತಜ್ಞ ಡಾ. ರಾಮು ಮೂಲಗಿ ಅವರನ್ನು ಆಯ್ಕೆ ಮಾಡಲಾಗಿದೆ.
ಜ. 12ರಂದು ಬೆಳಗ್ಗೆ 11ಕ್ಕೆ ವಿದ್ಯಾನಗರದ ಕನಕದಾಸ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಜರಗುವ ಮಹಾನಗರ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.