ಚುಟುಕು ಸಾಹಿತ್ಯ ಸಮ್ಮೇಳನ ಏ. 11ರಿಂದ

9manju2-Web
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಅಶೋಕ ಮಳಗಲಿ ಮಾತನಾಡಿದರು. ಸಾಹಿತಿ ಗುಂಡೆನಟ್ಟಿ ಮಧುಕರ, ಪಿ.ಬಿ. ಸ್ವಾಮಿ, ಎಚ್.ಆರ್.ಜಗದಾರ ಇತರರು ಇದ್ದರು.
Published on

ಬೆಳಗಾವಿ: ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಮದುರ್ಗ ಪಟ್ಟಣದಲ್ಲಿ ಏಪ್ರಿಲ್ 11 ಮತ್ತು 12ರಂದು ಜಿಲ್ಲಾ ಮಟ್ಟದ 3ನೇ ಚುಟುಕು ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ ಎಂದು ಪರಿಷತ್‌ನ ಅಧ್ಯಕ್ಷ ಅಶೋಕ ಮಳಗಲಿ ತಿಳಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಎರಡು ದಿನಗಳ ಸಮ್ಮೇಳನದಲ್ಲಿ ಸರ್ವಾಧ್ಯಕ್ಷರ ಮೆರವಣಿಗೆ, ವಿಚಾರ ಗೋಷ್ಠಿ, ಚುಟುಕು ಕಾವ್ಯವಾಚನ ಗೋಷ್ಠಿ, ವಿಶೇಷ ಉಪನ್ಯಾಸ, ಸಾಧಕರ ಸನ್ಮಾನ, ಹೊಸ ಚುಟುಕು ಪುಸ್ತಕಗಳ ಬಿಡುಗಡೆ, ಪುಸ್ತಕ ಪ್ರದರ್ಶನ, ಕಲಾ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈಗಾಗಲೇ ಹಿರಿಯ ಸಾಹಿತಿ ಎಲ್.ಎಸ್. ಶಾಸ್ತ್ರಿ ಅವರನ್ನು ಸರ್ವಾನುಮತದಿಂದ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾಗಿ ಶಾಸಕ ಮಹಾದೇವಪ್ಪ ಯಾದವಾಡ, ಮಾಜಿ ಶಾಸಕ ಅಶೋಕ ಪಟ್ಟಣ ಗೌರವಾಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ನ ಪದಾಧಿಕಾರಿಗಳಾದ ಗುಂಡೆನಟ್ಟಿ ಮಧುಕರ, ಪಿ.ಬಿ. ಸ್ವಾಮಿ, ಎಚ್.ಆರ್. ಜಗದಾರ, ಸೋಮಶೇಖರ ಸೊಗಲದ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net