

ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಯುವತಲೆಮಾರನ್ನು ಕನ್ನಡಪರ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಗಳಾಗಿಸುವ ರೀತಿಯಲ್ಲಿ ಕನ್ನಡ ಕಾರ್ಯಕ್ರಮ ಆಯೋಜಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು.
ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಉದ್ಘಾಟಿಸಿ ಮಾತನಾಡಿದರು.
ಯುಗಪುರುಷ ಕಿನ್ನಿಗೋಳಿ ಆಶ್ರಯದಲ್ಲಿ ಕೇರಳ ರಾಜ್ಯಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾಸರಗೋಡು, ಕಾಸರಗೋಡು ಕನ್ನಡ ಭವನ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಸಹಭಾಗಿತ್ವದಲ್ಲಿ ಆಯೋಜಿಸಲಾಗಿತ್ತು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಶ್ರೀಪತಿ ಭಟ್ ಮೂಡುಬಿದಿರೆ, ಯುಗಪುರುಷದ ಭುವನಾಭಿರಾಮ ಉಡುಪ, ಕಥಾಬಿಂದು ಪ್ರದೀಪ್‌ಕುಮಾರ್, ಪ್ರಾಂಶುಪಾಲ ರಾಜೇಶ್‌ಚಂದ್ರ, ಸತ್ಯವತಿ ಭಟ್ ಕೊಳಚಪ್ಪು, ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಪ್ರವೀಣ್ ಕುಮಾರ್, ಪಮ್ಮಿ ಕೊಡಿಯಾಲ್‌ಬೈಲ್, ರೇಖಾ ಸುದೇಶ್ ರಾವ್, ವಸಂತ ಕೆರೆಮನೆ ಅನಿತಾ ಶೆಣೈ ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸಂಚಾಲಕರಾದ ಜಯಾನಂದ ಪೆರಾಜೆ ಹಾಗೂ ಡಾ.ಶಾಂತಾ ಪುತ್ತೂರು ಸ್ವಾಗತಿಸಿದರು. ದ.ಕ.ಘಟಕ ಕಾರ್ಯದರ್ಶಿ ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು. ಉಷಾ ಶಶಿಧರ್ ವಂದಿಸಿದರು.
ರಾಷ್ಟ್ರಕವಿ ಗೋವಿಂದ ಪೈ ಪ್ರಶಸ್ತಿ ಪ್ರದಾನ
ಕನ್ನಡ ಭವನದ ಪ್ರಥಮ ‘ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ 2025’ನ್ನು ಕನ್ನಡ ಭವನ ಸ್ಥಾಪಕ ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾರಾಣಿ ಜಂಟಿಯಾಗಿ ನೀಡಿದರು. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್‌ನ ಪ್ರಥಮ ಚುಟುಕು ಸ್ಪರ್ಧಾ ವಿಭಾಗದಲ್ಲಿ ವಿಜೇತರಾದ 5 ಮಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಘಟಕ, ‘ದಕ್ಷಿಣ ಕನ್ನಡ ಜಿಲ್ಲಾ ಕಾವ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.