ಚುಟುಕು ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

New Project (27)
Published on

ಕಾಸರಗೋಡು: ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಕೇರಳ ಗಡಿನಾಡ ಘಟಕ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಮಾ.27ರಂದು ಕಾಸರಗೋಡಿನಲ್ಲಿ ನಡೆಯಲಿರುವ 7ನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ ವಿಟ್ಲದಲ್ಲಿ ಚುಟುಕು ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಜರುಗಿತು.

ಮೈಸೂರು ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿಯ ಸ್ಥಾಪಕ ರಾಜ್ಯ ಪ್ರಧಾನ ಸಂಚಾಲಕ ಡಾ.ಎಂ.ಜಿ.ಆರ್.ಅರಸ್ ಬಿಡುಗಡೆಗೊಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು, ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಶಿವರಾಮ ಕಾಸರಗೋಡು, ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಗೋಪಾಲಕೃಷ್ಣ ಶಾಸ್ತ್ರಿ, ಸುಳ್ಯದ ಅಧ್ಯಕ್ಷೆ ಅಶ್ವಿನಿ ಕೋಡಿಬೈಲು, ಬಂಟ್ವಾಳದ ಅಧ್ಯಕ್ಷ ಆನಂದ ರೈ ಅಡ್ಕಸ್ಥಳ, ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಇರಾ ನೇಮು ಪೂಜಾರಿ, ಮುಳಿಯ ಶಂಕರ ಭಟ್, ಸುದರ್ಶನ್ ಪಡಿಯಾರ್ ವಿಟ್ಲ, ವೇಣುಗೋಪಾಲ ಶೆಟ್ಟಿ ಮರುವಳ, ನಟರಾಜ ಮೈಸೂರು, ಸೀತಾಲಕ್ಷ್ಮೀ ವರ್ಮ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net