ಪ್ರಮುಖ ರಸ್ತೆಗಳ ದುರಸ್ತಿಗೆ ನಾಗರಿಕ ಸಮಿತಿ ಒತ್ತಾಯ

Published on

ವಿರಾಜಪೇಟೆ: ನಗರದ ಪ್ರಮುಖ ರಸ್ತೆಗಳು ಮಳೆಯಿಂದಾಗಿ ತೀರ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿ ನಿರ್ಮಾಣವಾಗಿದೆ. ಮಳೆಯ ಬಳಿಕ ರಸ್ತೆ ದುರಸ್ತಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದ ಅಧಿಕಾರಿಗಳು ಕೈಚೆಲ್ಲಿದ್ದಾರೆ. ಕೂಡಲೇ ರಸ್ತೆ ದುರಸ್ತಿ ಮಾಡಬೇಕೆಂದು ವಿರಾಜಪೇಟೆ ನಾಗರಿಕ ಸಮಿತಿ ಒತ್ತಾಯಿಸಿದೆ.

ರಸ್ತೆಗಳು ಹಾಳಾಗಿರುವ ಜತೆಗೆ ಬೀದಿ ದೀಪಗಳು ಕೆಟ್ಟಿವೆ. ಇದರಿಂದ ವಾಹನ ಸವಾರರು ಹಗಲು ಮತ್ತು ರಾತ್ರಿ ಹೊತ್ತು ಸಂಚರಿಸಲು ಕಷ್ಟಪಡುವಂತಾಗಿದೆ. ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟಲು ಪುರಸಭೆಯು ಯಾವುದೇ ಕ್ರಮ ಜರುಗಿಸಿಲ್ಲ ಎಂದು ವಿರಾಜಪೇಟೆ ನಾಗರಿಕ ಸಮಿತಿ ಸದಸ್ಯ ಅಬ್ದುಲ್ ರೆಹಮಾನ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಸಮಿತಿ ಸಂಚಾಲಕ ಡಾ.ಇ.ಆರ್.ದುರ್ಗಾ ಪ್ರಸಾದ್ ಮಾತನಾಡಿ, ನಗರದ ಪ್ರಮುಖ ರಸ್ತೆಗಳು ಗುಂಡಿಗಳಿಂದ ಆವೃತವಾಗಿವೆ. ರಾತ್ರಿ ಹೊತ್ತಿನಲ್ಲಿ ಬೀದಿ ದೀಪಗಳು ಉರಿಯುತ್ತಿಲ್ಲ. ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಿತಿ ಸದಸ್ಯರಾದ ಎನ್.ಕೆ.ಶರೀಫ್ ಇತರರು ಇದ್ದರು.

a

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net