ಗಾಮನಗಟ್ಟಿಯಲ್ಲಿ ಪೌರತ್ವ ತರಬೇತಿ ಶಿಬಿರ

IMG_20250416_204751_453.jpg
Published on

ಹುಬ್ಬಳ್ಳಿ: ತಾಲೂಕಿನ ಗಾಮನಗಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೆಎಲ್ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ಆಯೋಜಿಸಿದ್ದ ಎರಡನೇ ದಿನದ ಪೌರತ್ವ ತರಬೇತಿ ಶಿಬಿರದಲ್ಲಿ ಹಲವು ಮಾಹಿತಿ ನೀಡಲಾಯಿತು.

ಜಿ.ಕೆ. ಕಾನೂನು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜ್ಞಾನೇಶ್ವರ ಚೌರಿ ಅವರು ಶಿಕ್ಷಣದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನತೆ ಕುರಿತು ಉಪನ್ಯಾಸ ನೀಡಿದರು.

ಡಾ. ಶೀತಲ ಆರ್. ತಿವಾರಿ ಅವರು ಭಾಷಾ ಶಿಕರಿಗೆ ಕೌಶಲಗಳ ಪ್ರಾಮುಖ್ಯತೆ ಕುರಿತು ಮಾತನಾಡಿ, ಭಾಷಾ ಕೌಶಲ ಬೆಳೆಸಿಕೊಳ್ಳುವುದರ ಮೂಲಕ ಬೋಧನಾ ಕ್ಷೇತ್ರದಲ್ಲಿ ತಮ್ಮ ಬೇಡಿಕೆಯನ್ನು ಹೆಚ್ಚಿಸಿಕೊಂಡು ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಉಪನ್ಯಾಸಕ ವೀರೇಶ ಕಲಕೇರಿ ಅವರು, ಶೈಕ್ಷಣಿಕ ಅರ್ಹತೆಯೊಂದಿಗೆ ಉತ್ತಮ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಲಹೆ ನೀಡಿದರು. ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಲಿಂಗರಾಜ ಮುಳ್ಳಳ್ಳಿ ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿ ಶೃತಿ ಕಾತರಕಿ ಭಕ್ತಿಗೀತೆ ಹಾಡಿದರು. ಸಂಗೀತಾ ಕಟಗಿ ಕಾರ್ಯಕ್ರಮ ನಿರೂಪಿಸಿದರು.
ಪೂಜಾ ಗೋದಿಗೌಡರ ವಂದಿಸಿದರು.
ಡಾ. ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ ವತಿಯಿಂದ ಉಚಿತ ನೇತ್ರ ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು. ಡಾ. ಆಶೀಸ ಅವರ ನೇತೃತ್ವದಲ್ಲಿ ತಪಾಸಣೆ ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net