ಸಂಡೆ ಬಜಾರ್ ಬೀದಿ ವ್ಯಾಪಾರಕ್ಕೆ ಮುಕ್ತ ಅವಕಾಶಕ್ಕೆ ಸಿಐಟಿಯು ಒತ್ತಾಯ

ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
Published on
ಮಂಗಳೂರು : ಸಂಡೆ ಬಜಾರ್ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸುವ ಹುನ್ನಾರವನ್ನು ಖಂಡಿಸಿ, ಪರ್ಯಾಯ ವ್ಯವಸ್ಥೆ ಆಗುವವರೆಗೆ ಪುರಭವನದ ಬಳಿಯೇ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಗುರುವಾರ ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣ ಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಸಿಐಟಿಯು ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ಸಂಘದ ಗೌರವಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಸಿಐಟಿಯು ಜಿಲ್ಲಾ ಕೋಶಾಧಿಕಾರಿ ಯೋಗೀಶ್ ಜಪ್ಪಿನಮೊಗರು ಮಾತನಾಡಿದರು.
ಪ್ರತಿಭಟನೆಗೂ ಮುನ್ನ ಬಲ್ಲಾಳಭಾಗ್ ವೃತ್ತದಿಂದ ನಗರಪಾಲಿಕೆ ಕಚೇರಿ ವರೆಗೆ ಮೆರವಣಿಗೆ ನಡೆಯಿತು. ನಗರಪಾಲಿಕೆ ಉಪ ಆಯುಕ್ತ ಸ್ವಾಮಿ ಎ. ಎಲ್ ಮನವಿ ಸ್ವೀಕರಿಸಿ, ಬೀದಿಬದಿ ವ್ಯಾಪಾರಿಗಳ ಅಹವಾಲು ಆಲಿಸಿದರು. ಬರ್ಕೆ ಪೊಲೀಸರು ಸೂಕ್ತ ಬಂದೋಬಸ್ತ್ ನಡೆಸಿದ್ದರು.
ಸಂಘದ ಅಧ್ಯಕ್ಷರಾದ ಮುಜಾಫರ್ ಅಹ್ಮದ್, ಉಪಾಧ್ಯಕ್ಷರಾದ ಹಸನ್ ಕುದ್ರೋಳಿ, ಎಂ. ಎನ್ ಶಿವಪ್ಪ, ಅಬ್ದುಲ್ ಖಾದರ್, ಪ್ರಮುಖರಾದ ಹಂಝ ಮೊಹಮ್ಮದ್, ವಿಜಯ್ ಜೈನ್, ಸಿಕಂದರ್ ಬೇಗ್, ನೌಶಾದ್ ಕಣ್ಣೂರ್, ರಫೀಕ್ ಪಾಂಡೇಶ್ವರ ಮೊದಲಾದವರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net