

ಬೆಳಗಾವಿ :ಮಹಾನಗರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸ್ಥಳೀಯ ಸೇವಾ ಸಂಸ್ಥೆಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಜನರು ಹಾಗೂ ಮಹಿಳೆಯರು ಸಹಕರಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತ ಅಶೋಕ ದುಡಗುಂಟಿ ಹೇಳಿದರು.
ನಗರದ ಚನ್ನಮ್ಮ ವೃತ್ತದಲ್ಲಿ ಮಹಾನಗರ ಪಾಲಿಕೆಯು ಪ್ಲಾಸ್ಟಿಕ್ ಮುಕ್ತ ಅಭಿಯಾನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗಾ ಚಾಲನೆ ನೀಡಿ ಮಾತನಾಡಿದರು. ಪ್ಲಾಸ್ಟಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಾವೆಲ್ಲಾ ಪರ್ಯಾಯ ಯೋಜನೆಗಳನ್ನು ರೂಪಿಸಿಕೊಳ್ಳಬೇಕು. ನಗರವನ್ನು ಪ್ಲಾಸ್ಟಿಕ್‌ನಿಂದ ಮುಕ್ತಗೊಳಿಸಲು ಪಾಲಿಕೆಯು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ. ಅಲ್ಲದೆ, ಇದಕ್ಕಾಗಿ ಹೊಸ ಹೊಸ ಜಾಗೃತಿ ಅಭಿಯಾನ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
--