

ಸಿಂಧನೂರು: ಆದಾಯ ತೆರಿಗೆ ಪಾವತಿ ಮಿತಿಗಳ ಹೊರಗಿರುವ ಎಲ್ಲ ಕುಟುಂಬಗಳಿಗೆ ತಿಂಗಳಿಗೆ 7500 ರೂ.ನಂತೆ ಆರು ತಿಂಗಳವರೆಗೆ ನೀಡುವಂತೆ ಒತ್ತಾಯಿಸಿ ಭಾರತ ಕಮ್ಯುನಿಷ್ಟ್ ಪಕ್ಷ (ಮಾರ್ಕ್ಸ್‌ವಾದಿ) ತಾಲೂಕು ಸಮಿತಿ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮಂಜುನಾಥ ಭೋಗಾವತಿಗೆ ಮಂಗಳವಾರ ಮನವಿ ಸಲ್ಲಿಸಿತು.
ಕರೊನಾ ವೈರಸ್ ನಿಯಂತ್ರಿಸುವ ವೈದ್ಯಕೀಯ ಸಿಬ್ಬಂದಿಗೆ ಸರಿಯಾದ ರಕ್ಷಣಾ ಸಾಮಗ್ರಿ ವಿತರಿಸಿಲ್ಲ. ರೈತರು ಬೆಳೆದ ಬೆಳೆಗೆ ಸಮರ್ಪಕ ಬೆಲೆ ನೀಡಬೇಕು. ಕೂಡಲೇ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಯಂತೆ ಆರು ತಿಂಗಳು ಆಹಾರ ಧಾನ್ಯ ವಿತರಿಸಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು. ನಗರದ ಬಡವರಿಗೂ ಖಾತ್ರಿ ಯೋಜನೆ ವಿಸ್ತರಿಸಬೇಕು ಎಂದು ಒತ್ತಾಯಿಸಲಾಯಿತು. ಜಿಲ್ಲಾ ಸಮಿತಿ ಸದಸ್ಯ ಶೇಕ್ಷಾಖಾದ್ರಿ, ತಾಲೂಕು ಕಾರ್ಯದರ್ಶಿ ಯಂಕಪ್ಪ ಕೆಂಗಲ್ ಇತರರಿದ್ದರು.