ಮಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್ ನಕಲಿ ಖಾತೆ

fake account
Published on

ಮಂಗಳೂರು: ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರ ಹೆಸರಿನಲ್ಲಿ ಮತ್ತೆ ನಕಲಿ ಫೇಸ್‌ಬುಕ್ ಖಾತೆಯನ್ನು ಸೃಷ್ಟಿಸಿ ಅವರ ಸ್ನೇಹಿತರಿಂದ ಹಣಕ್ಕಾಗಿ ಬೇಡಿಕೆ ಸಲ್ಲಿಸಿದ್ದಾರೆ.

ಈ ಬಗ್ಗೆ ಶಶಿಕುಮಾರ್ ತಮ್ಮ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ತಿಳಿಸಿದ್ದು, ಯಾರು ಕೂಡ ಹಣ ಹಾಗೂ ಮಾಹಿತಿ ಹಂಚಿಕೊಂಡು ಮೋಸ ಹೋಗಬಾರದು ಎಂದು ವಿನಂತಿಸಿದ್ದಾರೆ.

ನನ್ನ ಹೆಸರಿನಲ್ಲಿ ಈ ಹಿಂದೆಯೂ ಹಲವು ಬಾರಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ ಸಲ್ಲಿಸಿದ್ದರು. ಇಂತಹ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದ್ದು ಅಮಾಯಕರನ್ನು ಮೋಸ ಮಾಡಲಾಗುತ್ತಿದೆ. ಯಾರಿಂದಾದರೂ ಹಣಕ್ಕಾಗಿ ಬೇಡಿಕೆ ಬಂದಾಗ ಕರೆ ಮಾಡಿ ಅಥವಾ ಸಂದೇಶ ಕಳುಹಿಸಿ ವಿಚಾರಿಸಿಕೊಳ್ಳದೆ ಮುಂದುವರಿಯಬಾರದು ಎಂದು ಆಯುಕ್ತರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net