ರಾಜ್ಯದಲ್ಲಿಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ! Weather report

untitled-design-50-69033a6216171
Published on

ಬೆಂಗಳೂರು: ಬೆಂಗಳೂರಿನಾದ್ಯಂತ ಗುರುವಾರ(ಅ.30) ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆ ಇದ್ದು, ನಗರದಲ್ಲಿ ದಿನವಿಡೀ ಮೋಡ (Weather report) ಕವಿದ ವಾತಾವರಣವಿರಲಿದೆ. ಹಾಗೆಯೇ ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 21 ಡಿಗ್ರಿ ಸೆಲ್ಸಿಯಸ್ ಮತ್ತು 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನಿಡಿದೆ.

ಮಳೆ ಮತ್ತು ಮೋಡ ಕವಿದ ವಾತಾವರಣವು ನಗರದಲ್ಲಿ ತಾಪಮಾನವನ್ನು ಸೌಮ್ಯ ಮತ್ತು ಆಹ್ಲಾದಕರವಾಗಿಡುತ್ತದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದ್ದು, ಏತನ್ಮಧ್ಯೆ, ರಾಜ್ಯದ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದೆ.

ಎಲ್ಲೆಲ್ಲಿ ಮಳೆಯಾಗುವ ನಿರೀಕ್ಷೆ?

ಬೀದರ್, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಯಾದಗಿರಿ, ಬೆಂಗಳೂರು ಜಿಲ್ಲೆಗಳಲ್ಲಿ ಮಳೆಯೊಂದಿಗೆ ಗುಡುಗು, ಮಿಂಚು, ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಆರ್ದ್ರತೆಯು ಶೇಕಡಾ 88 ರಷ್ಟಿರುವ ನಿರೀಕ್ಷೆಯಿದ್ದು, ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿಯ ಗುಣಮಟ್ಟ ಸೂಚ್ಯಾಂಕ ಸುಮಾರು 30ರಷ್ಟಿದ್ದು, ದಿನವಿಡೀ ಒಂದೇ ಆಗಿರುವ ನಿರೀಕ್ಷೆ ಇದೆ ಎಂದು ತಿಳಿಸಿದೆ.

IMD ಸಲಹೆಗಳೇನು?

ಮಳೆಯಿಂದಾಗಿ ನಗರಗಳಲ್ಲಿ ತಾತ್ಕಾಲಿಕ ವಿದ್ಯುತ್​ ವ್ಯತ್ಯಯ ಉಂಟಾಗಬಹುದು. ಸಣ್ಣಪುಟ್ಟ ಸಂಚಾರಗಳಲ್ಲಿ ದಟ್ಟಣೆ, ದುರ್ಬಲವಾದ ಮರದ ಕೊಂಬೆಗಳು ನೆಲಕ್ಕುರುಳುವ ಸಾಧ್ಯತೆ ಹೆಚ್ಚಿದೆ. ಹಾಗಾಗಿ ನಿವಾಸಿಗಳು ಮನೆಯೊಳಗೆ ಇದ್ದು, ಕಿಟಕಿ ಮತ್ತು ಬಾಗಿಲುಗಳನ್ನು ಮುಚ್ಚುವಂತೆ ತಿಳಿಸಲಾಗಿದೆ.

ಮೊಂಥಾ ಚಂಡಮಾರುತ ಬಗ್ಗೆ

ಮೊಂಥಾ' ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ದಾಟಿದ ನಂತರ ದುರ್ಬಲಗೊಂಡು ಬಿರುಗಾಳಿಯಾಗಿ ಬದಲಾಗಿದೆ. ಹಾಗೆಯೇ ಈ ಚಂಡಮಾರುತದ ಪ್ರಭಾವದಿಂದ ಆಂಧ್ರಪ್ರದೇಶ, ಒಡಿಶಾ, ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರಲಿದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net