ಏ.7ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ: ಪೌರ ಚಾಲಕರ ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಹೇಳಿಕೆ

Civic Drivers Association press conference Mandya
Published on

ಮಂಡ್ಯ: ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಮಾಡಿದ ರಾಜ್ಯಸರ್ಕಾರವನ್ನು ಅಭಿನಂದಿಸುವ ಹಿನ್ನಲೆ ಏ.7ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರ್‌ನಲ್ಲಿ ರಾಜ್ಯಮಟ್ಟದ ಬೃಹತ್ ಸಮಾವೇಶ ಹಾಗೂ 25 ವರ್ಷದ ಬೆಳ್ಳಿ ಮಹೋತ್ಸವ ಆಯೋಜಿಸಲಾಗಿದೆ ಎಂದು ಪೌರ ಚಾಲಕರ ರಾಜ್ಯ ಕಾರ್ಯದರ್ಶಿ ಮದ್ದೂರು ಶ್ರೀನಿವಾಸ್ ತಿಳಿಸಿದರು.

ಭಾರತದಲ್ಲಿಯೇ ಕರ್ನಾಟಕ ಸರ್ಕಾರ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಮಾದರಿಯಾಗಿದೆ. ಇದರಿಂದ 29 ಸಾವಿರ ಪೌರಕಾರ್ಮಿಕರು ಖಾಯಂ ನೌಕರರಾಗಿ ನೇಮಿಸಿದ ಸರ್ಕಾರವನ್ನು ಅಭಿನಂದಿಸುವುದು ನಮ್ಮ ಕರ್ತವ್ಯ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅಂದು ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದು, ಸಚಿವರಾದ ಕೆ.ಎಚ್.ಮುನಿಯಪ್ಪ, ಎಚ್.ಸಿ.ಮಹದೇವಪ್ಪ, ರಾಮಲಿಂಗರೆಡ್ಡಿ, ಕೆ.ಜೆ.ಜಾರ್ಜ್, ಭೈರತಿ ಸುರೇಶ್ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. ಸಮಾವೇಶದಲ್ಲಿ 25 ಸಾವಿರಕ್ಕೂ ಹೆಚ್ಚು ಹಾಗೂ ಜಿಲ್ಲೆಯಿಂದ 500ಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ ಎಂದು ತಿಳಿಸಿದರು.

ರಾಜ್ಯ ಉಪಾಧ್ಯಕ್ಷ ಶಿವಣ್ಣ, ಮಂಡ್ಯ ತಾಲೂಕು ಅಧ್ಯಕ್ಷ ಗಣೇಶ್, ಆರ್ಟಿಸ್ಟ್ ನಾಗರಾಜ್, ಶಂಕರ್‌ಬಾಬು, ಮಣಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net