ಆ.13ರಂದು ಕೆಟಿಎಸ್‌ಗೆ ನಾಗರಿಕ ಸನ್ಮಾನ: ಸಮಿತಿಯ ಸಂಚಾಲಕ ಲೋಕೇಶ್ ಚಂದಗಾಲು ಮಾಹಿತಿ

1
Published on

ಮಂಡ್ಯ: ಕಳೆದ ವರ್ಷದ ಕರ್ನಾಟಕ ವಿಧಾನ ಪರಿಷತ್‌ನ ಅತ್ಯುತ್ತಮ ಶಾಸಕ ಪ್ರಶಸ್ತಿ ಸ್ವೀಕರಿಸಿರುವ ಕೆ.ಟಿ.ಶ್ರೀಕಂಠೇಗೌಡ ಅವರಿಗೆ ನಾಗರೀಕ ಸನ್ಮಾನ ಸಮಿತಿ ಹಾಗೂ ದೇವರ ಕಾಡು ಬಳಗದ ಸಹಯೋಗದಲ್ಲಿ ಆ.13ರಂದು ನಾಗರೀಕ ಸನ್ಮಾನವನ್ನು ಏರ್ಪಡಿಸಲಾಗಿದೆ ಎಂದು ಸಮಿತಿಯ ಸಂಚಾಲಕ ಲೋಕೇಶ್ ಚಂದಗಾಲು ನೀಡಿದರು.

ಅಂದು ಸಂಜೆ 4 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಸಮಾರಂಭದ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ವಿಶ್ವಮಾನವ ಕ್ಷೇತ್ರದ ಶ್ರೆ ಪುರುಷೋತ್ತಮಾನಂದನಾಥ ಸ್ವಾಮೀಜಿ ವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕೆ.ಟಿ.ಶ್ರೀಕಂಠೇಗೌಡ ಅವರನ್ನು ಸನ್ಮಾನಿಸುವರು. ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಚಂದ್ರಶೇಖರಯ್ಯ ಅಧ್ಯಕ್ಷತೆ ವಹಿಸುವರು. ಪ್ರಗತಿಪರ ಚಿಂತಕ ಪ್ರೊ.ಪಿ.ವಿ.ನಂಜರಾಜ ಅರಸ್ ಹಾಗೂ ನಿವೃತ್ತ ಪ್ರಾಂಶುಪಾಲ ಡಾ.ಎಸ್.ಬಿ.ಶಂಕರೇಗೌಡ ಅಭಿನಂದನಾ ನುಡಿಗಳನ್ನಾಡುವರು. ಕೆ.ಆರ್.ಪೇಟೆ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಎಂ.ಶ್ರೀನಿವಾಸ್, ಡಾ.ಕೆ.ಅನ್ನದಾನಿ, ಸುರೇಶ್‌ಗೌಡ, ರವೀಂದ್ರ ಶ್ರೀಕಂಠಯ್ಯ, ಎನ್. ಅಪ್ಪಾಜಿಗೌಡ ಹಾಗೂ ಕೆ.ಟಿ.ಶ್ರೀಕಂಠೇಗೌಡರ ಪತ್ನಿ ಬಿ.ಎಂ.ವೀಣಾ ಭಾಗವಹಿಸುವರು ಎಂದು ವಿವರಿಸಿದರು.

ಸಮಿತಿಯ ಕೀಲಾರ ಕೃಷ್ಣ, ಮಂಗಲ ಎಂ.ಯೋಗೀಶ್, ನಾಗಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net