

ಕುಶಾಲನಗರ: ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮ ಪಂಚಾಯತಿ ಪೌರ ಕಾರ್ಮಿಕರಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಂಚಾಯತಿ ಸಭಾಂಗಣದಲ್ಲಿ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ಅಧ್ಯಕ್ಷ ಸಿ.ಎಲ್.ವಿಶ್ವ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಪಿ.ಎನ್.ಕುಸುಮ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎಸ್.ರಾಜಶೇಖರ್, ಕಾರ್ಯದರ್ಶಿ ಎಂ.ಆರ್.ಶೇಷಗಿರಿ, ಗ್ರಾ.ಪಂ.ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಇವರ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರಾದ ರಾಮು ಮತ್ತು ಅರಗಿಣಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.