ಅ.8ರಂದು ರಾಜ್ಯಪಾಲ ವಿಜಯಶಂಕರ್‌ಗೆ ನಾಗರಿಕ ಸನ್ಮಾನ

vijaya shankar
Published on

ಹುಣಸೂರು: ಹುಣಸೂರು ನಗರದ ಕಾವೇರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಅವರಿಗೆ ನಾಗರಿಕ ಸನ್ಮಾನ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟಿಎಪಿಸಿಎಂಎಸ್ ಅಧ್ಯಕ್ಷ ಬಸವಲಿಂಗಯ್ಯ ಹೇಳಿದರು.


ಅ.8ರಂದು ಆಸ್ಪತ್ರೆ ಆವರಣದಲ್ಲಿ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಅವರಿಗೆ ನಾಗರಿಕ ಸನ್ಮಾನ ಆಯೋಜಿಸಲಾಗಿದೆ. ಕಾರ್ಕ್ರಮದಲ್ಲಿ ಕಾಗಿನೆಲೆ ಕನಕ ಗುರು ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ಶಾಸಕ ಜಿ.ಡಿ.ಹರೀಶ್‌ಗೌಡ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮತ್ತು ಎಲ್ಲ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.


ಅಲ್ಲದೆ 2024ನೇ ಸಾಲಿನಲ್ಲಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕೋರ್ಸ್‌ಗಳಿಗೆ ಸರ್ಕಾರಿ ಸೀಟುಗಳನ್ನು ಪಡೆದ ತಾಲೂಕಿನ ವಿದ್ಯಾರ್ಥಿಗಳಿಗೆ, 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಆಯೋಜಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಯೊಂದಿಗೆ ಸೆ.30ರೊಳಗೆ ಆಸ್ಪತ್ರೆಗೆ ತಲುಪಿಸಬೇಕೆಂದು ಕೋರಿದರು.
ನಗರಸಭಾ ಸದಸ್ಯ ಗಣೇಶ್ ಕುಮಾರಸ್ವಾಮಿ, ದೇವರಾಜ್, ಮುಖಂಡರಾದ ಸತೀಶ್ ಪಾಪಣ್ಣ, ಸರ್ದಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net