ವಿದ್ಯಾರ್ಥಿಗಳಿಗೆ ಮಕ್ಕಳ ಹಕ್ಕುಗಳ ಅರಿವು ಮೂಡಿಸಿ

dj nyk kanunu arivu
Published on

ನಾಯಕನಹಟ್ಟಿ: ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಮಕ್ಕಳ ಹಕ್ಕುಗಳು ಹಾಗೂ ಲೈಂಗಿಕ ದೌರ್ಜನ್ಯಗಳ ತಡೆ ಕಾನೂನುಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಸಲಹೆ ನೀಡಿದರು.

ಸಮೀಪದ ತುರುವನೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಸರ್ಕಾರಿ ಪದವಿಪೂರ್ವಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿಯೇ ಜೀವನದ ಸ್ಪಷ್ಟ ಗುರಿಯನ್ನು ವಿದ್ಯಾರ್ಥಿಗಳು ಹೊಂದಬೇಕು ಎಂದರು.

ಪ್ರತಿಯೊಬ್ಬರೂ ಚಿಕ್ಕಂದಿನಿಂದಲೇ ಮಕ್ಕಳ ಹಕ್ಕುಗಳು ಮತ್ತು ಪೋಕ್ಸೋ ಕಾಯ್ದೆಯ ಬಗ್ಗೆ ಅರಿತುಕೊಳ್ಳಬೇಕು ಎಂದು ತಿಳಿಸಿದರು.

ವಕೀಲರ ಸಂಘದ ಅಧ್ಯಕ್ಷ ವೈ.ತಿಪ್ಪೇಸ್ವಾಮಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು 18ವರ್ಷ ತುಂಬುವವರೆಗೂ ತಪ್ಪದೇ ಪಾಲಕರು ಮತ್ತು ಶಿಕ್ಷಕರ ಮಾರ್ಗದರ್ಶನದಲ್ಲೇ ಮುಂದುವರಿಯಬೇಕು.

ತಮ್ಮ ಹದಿಹರೆಯದ ವಯಸ್ಸಿನ ಮುಗ್ಧ ಮನಸ್ಸನ್ನು ಹಾಳು ಮಾಡುವ ವ್ಯಕ್ತಿಗಳಿಂದ ಜಾಗೃತರಾಗಿರಿ ಎಂದು ಸಲಹೆ ನೀಡಿದರು.

ಉಪ ಪ್ರಧಾನ ಕಾನೂನು ನೆರವು ಅಧ್ಯಕ್ಷ ಎಂ.ಮೂರ್ತಿ ಮಾತನಾಡಿ, ವಿಶ್ವಸಂಸ್ಥೆ 1992ರಲ್ಲಿ ಸಂವಿಧಾನ ಬದ್ಧ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಕಠಿಣ ಕಾನೂನನ್ನು ಅನುಷ್ಟಾನಗೊಳಿಸಿದೆ.

ಮನೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಹಿತಕರ ಸನ್ನಿವೇಶ ಕಂಡಾಗ ಪ್ರತಿಭಟಿಸುವ ಮನೋಭಾವನೆ ಬೆಳಸಿಕೊಳ್ಳಬೇಕು ಎಂದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಗಂಗಾಧರ್, ಪ್ರಾಚಾರ್ಯ ಕೆ.ತಿಮ್ಮಯ್ಯ ಉಪ ಪ್ರಾಚಾರ್ಯ ಕಿರಣ್ಮಯಿ ಆರ್.ಬಂಡಿಗಡಿ, ಉಪನ್ಯಾಸಕ ತಿಪ್ಪಣ್ಣಗೌಡ, ಸಿ.ಎಲ್.ಏಕನಾಥ, ಬಿ.ನಾಗೇಂದ್ರ ಚೌಧರಿ, ಶಾಲಾಭಿವೃದ್ಧಿ ಸಂಘದ ಮಾರುತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net