ಪೌರ ಕಾರ್ಮಿಕ ವಿಷ ಸೇವಿಸಿ ಆತ್ಮಹತ್ಯೆ ಯತ್ನ

Crime
Published on

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿರುವ ಕೃಷ್ಣಾ ವಗ್ಗನ್ನವರ ಎಂಬಾತ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ.

ಪಾಲಿಕೆಯ ಗುತ್ತಿಗೆದಾರ ಕೃಷ್ಣಾ ಅರವೇಡ ಎಂಬುವರು ಕಿರುಕುಳ ನೀಡುತ್ತಿದ್ದಾರೆ. ಪಾಲಿಕೆ ಕೆಲಸದ ಜತೆ ಮನೆ ಹಾಗೂ ಜಮೀನು ಕೆಲಸಗಳನ್ನೂ ಮಾಡಿಸಿಕೊಳ್ಳುತ್ತಿದ್ದಾನೆ. ಸ್ವಚ್ಛತಾ ಕೆಲಸಕ್ಕೆ ಮಾಸಿಕ 6ರಿಂದ 8 ಸಾವಿರ ರೂಪಾಯಿ ವೇತನ ನೀಡುತ್ತಿದ್ದಾನೆ. ನನ್ನ ಸಾವಿಗೆ ಅವರೇ ಕಾರಣ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಮಾತು ಮುಗಿಸುತ್ತಲೇ ಕೃಷ್ಣಾ ವಗ್ಗನ್ನವರ ಕ್ರಿಮಿನಾಶಕ ಕುಡಿದಿದ್ದಾನೆ.

ಸ್ಥಳದಲ್ಲಿದ್ದ ಪೌರ ಕಾರ್ಮಿಕರು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net