ಪೌರಕಾರ್ಮಿಕರು ಆರೋಗ್ಯದ ಕಡೆಗೂ ಗಮನ ಹರಿಸಿ

25.Pyp..01
Published on

ಪಿರಿಯಾಪಟ್ಟಣ: ಪೌರಕಾರ್ಮಿಕರು ಪಟ್ಟಣದ ಸ್ವಚ್ಛತೆ ಜತೆಗೆ ತಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಪುರಸಭೆ ಅಧ್ಯಕ್ಷ ಪ್ರಕಾಶ್ ಸಿಂಗ್ ತಿಳಿಸಿದರು.

ಪಟ್ಟಣದ ಡಿ.ದೇವರಾಜ ಅರಸು ಭವನದಲ್ಲಿ ಏರ್ಪಡಿಸಿದ್ದ ಪೌರಕಾರ್ಮಿಕ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪೌರಕಾರ್ಮಿಕರಿಗೆ ವಿಶೇಷವಾದ ಗೌರವ ಮತ್ತು ಮಾನ್ಯತೆ ನೀಡುವ ಉದ್ದೇಶದಿಂದ ಪೌರಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು ಪ್ರತಿಯೊಬ್ಬರೂ ಪೌರಕಾರ್ಮಿಕರಿಗೆ ಕೃತಜ್ಞತೆಯನ್ನು ಸಲ್ಲಿಸಬೇಕು ಎಂದು ತಿಳಿಸಿದರು. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡಿದಲ್ಲಿ ಒಳ್ಳೆಯ ಉದ್ಯೋಗ ಪಡೆಯಬಹುದು ಎಂದರು.

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಅರ್ಷದ್ ಮಾತನಾಡಿ, ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಬಹಳ ಮುಖ್ಯವಾದದ್ದು, ಪೌರಕಾರ್ಮಿಕರು ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ ಮಕ್ಕಳಿಗೂ ಉತ್ತಮ ಶಿಕ್ಷಣ ಕೊಡಿಸುವಲ್ಲಿ ಗಮನಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪಟ್ಟಣದ ಪುರಸಭೆಯ 10 ಪೌರಕಾರ್ಮಿಕರನ್ನು ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯರಾದ ಪಿ.ಸಿ.ಕೃಷ್ಣ, ಮಂಜುನಾಥ್ ಸಿಂಗ್, ಪಿ.ಎನ್.ವಿನೋದ್, ಎಚ್.ಕೆ.ಮಂಜುನಾಥ್, ರವಿ, ಮಹೇಶ್, ತಮ್ಮಣ್ಣಯ್ಯ ರಾಜೇಶ್, ಶಾಮ್, ಮಲ್ಲಿಕಾರ್ಜುನ್, ಚಾಮರಾಜು, ರೋಹಿಲ್ಲಾ ಕಾನಂ, ಪುರಸಭೆಯ ಸಮುದಾಯ ಸಂಘಟನಾ ಅಧಿಕಾರಿ ಶರ್ಮಿಳ, ಪರಿಸರ ಇಂಜಿನಿಯರ್ ವೈಶಾಲಿ, ಆರೋಗ್ಯ ನಿರೀಕ್ಷಕರಾದ ಮೋಹನ್, ಪ್ರದೀಪ್, ಆರ್‌ಐ ರಾಮಕೃಷ್ಣ, ಕರ ವಸೂಲಿಗಾರರಾದ ಚಂದನ್, ಕುಮಾರ್, ಶರಣಪ್ಪ, ಹರೀಶ, ಮಂಜುನಾಥ್, ಚಿನ್ನೇಶ್, ಮೇಸ್ತ್ರಿ ಮಹೇಶ್, ಶ್ರೀನಿವಾಸ್, ನಾರಾಯಣ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net