ಪೌರ ಕಾರ್ಮಿಕರು ಆರೋಗ್ಯದತ್ತ ಗಮನಹರಿಸಲಿ Civil, servants, should, focus, on, their, health
ರಾಯಚೂರು: ಚಳಿ, ಮಳೆ, ಬಿಸಿಲನ್ನು ಲೆಕ್ಕಿಸದೆ ನಗರದ ಸ್ವಚ್ಛತೆಗಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ನಗರದಲ್ಲಿ ಮಂಗಳವಾರ ರಾಜಕಾಲುವೆ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಹಾಗೂ ವಿವಿಧ ಪರಿಕರಗಳನ್ನು ವಿತರಿಸಿ ಮಾತನಾಡಿದರು. ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಬೇಕು. ಯಾವುದೇ ಸಮಸ್ಯೆಯಾದಲ್ಲಿ ನೇರವಾಗಿ ನನಗೆ ಹೇಳುವಂತೆ ತಿಳಿಸಿದರು. ಪಾಲಿಕೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಆರ್‌ಡಿಎ ಸದಸ್ಯ ನರಸಿಂಹಲು ಮಾಡಗಿರಿ ಇತರರಿದ್ದರು.
13ರಾಚು05
ರಾಯಚೂರಿನಲ್ಲಿ ರಾಜಕಾಲುವೆ ಸ್ವಚ್ಛಗೊಳಿಸುವ ಪೌರ ಕಾರ್ಮಿಕರಿಗೆ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ಅವರು ಸುರಕ್ಷತಾ ಕಿಟ್ ಹಾಗೂ ವಿವಿಧ ಪರಿಕರಗಳನ್ನು ವಿತರಿಸಿದರು. ಪಾಲಿಕೆ ಅಧ್ಯಕ್ಷೆ ನರಸಮ್ಮ ಮಾಡಗಿರಿ, ಆರ್‌ಡಿಎ ಸದಸ್ಯ ನರಸಿಂಹಲು ಮಾಡಗಿರಿ ಇತರರಿದ್ದರು.