ಪ್ರತಿಭಟನೆ ಹಿಂಡೆದ ಪೌರನೌಕರರು

03 njd news 03
ನಂಜನಗೂಡಿನ ನಗರಸಭಾ ಕಚೇರಿ ಆವರಣದಲ್ಲಿ ನಡೆಯುತ್ತಿದ್ದ ಪೌರಕಾರ್ಮಿಕರ ಪ್ರತಿಭಟನೆ ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.
Published on

ನಂಜನಗೂಡು: ರಾಜ್ಯದ್ಯಂತ ಪೌರ ಸೇವಾ ನೌಕರರು ಸೋಮವಾರ ನಡೆಸುತ್ತಿದ್ದ ಪ್ರತಿಭಟನೆ ಮಂಗಳವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು.

ಪಟ್ಟಣದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣರಾವ್ ಮಾತನಾಡಿ, ನಮ್ಮ ಸಂಘದ ನಿರ್ದೇಶನದಂತೆ ಸೋಮವಾರ ಪ್ರತಿಭಟನೆ ಹಮ್ಮಿಕೊಂಡಿದ್ದವು. ಸಚಿವರು ಹಾಗೂ ಮುಖ್ಯಮಂತ್ರಿ ನಮ್ಮ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಮಾತುಕತೆ ನಡೆಸಿ, ಒಂದು ದಿನಾಂಕವನ್ನು ನಿಗದಿಪಡಿಸಿ ಬಗೆಹರಿಸಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ. ಅಲ್ಲದೆ ಅಲ್ಲಿಯವರೆಗೆ ಪ್ರತಿಭಟನೆ ಮುಂದೂಡಬೇಕು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಸಂಘ ನಿರ್ದೇಶನ ನೀಡಿರುವ ಕಾರಣ ಮಂಗಳವಾರ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಿ ನಗರಸಭೆಯ ಎಲ್ಲ ಪೌರ ನೌಕರರು ತಮ್ಮ ಕೆಲಸಕ್ಕೆ ಹಾಜರಾಗುತ್ತಿದ್ದಾರೆ. ಸಾರ್ವಜನಿಕರಿಗೆ ಯಾವುದೇ ಅನನುಕೂಲ ಆಗದಂತೆ ಕೆಲಸ ಕಾರ್ಯ ಮಾಡುವಂತೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನಗರಸಭಾ ಅಧ್ಯಕ್ಷ ಎನ್ ಶ್ರೀಕಂಠ ಮಾತನಾಡಿ, ಸಿದ್ದರಾಮಯ್ಯ ಅವರ ಸರ್ಕಾರ ಪೌರಕಾರ್ಮಿಕರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಹಂತ-ಹಂತವಾಗಿ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದೆ. ಈ ಹಿನ್ನೆಲೆ ಇಂದು ಪ್ರತಿಭಟನೆಯನ್ನು ಸ್ಥಗಿತಗೊಳಿಸಿ ಪೌರನೌಕರರು ತಮ್ಮ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ನಗರಸಭಾ ಆಯುಕ್ತ ವಿಜಯ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾರಾಯಣರಾವ್, ನಗರಸಭಾಧ್ಯಕ್ಷ ಎನ್.ಶ್ರೀಕಂಠ, ಪೌರಕಾರ್ಮಿಕರು, ನಗರಸಭಾ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net