ಮೈಸೂರಿನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Civil Workers' Day celebrated in Mysore
Published on

ಮೈಸೂರು: ದೇಶ ಸ್ವಚ್ಛ ಹಾಗೂ ಸುಂದರವಾಗಿ ಇರಲು ಪೌರಕಾರ್ಮಿಕರ ಸೇವೆ ಮಹತ್ತರವಾದದ್ದು ಎಂದು ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್ ಹೇಳಿದರು.

ನಗರದ ಕಲಾಮಂದಿರದಲ್ಲಿ ನಗರಪಾಲಿಕೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪೌರ ಕಾರ್ಮಿಕರ ಪರಿಶ್ರಮದಿಂದ ನಮ್ಮ ಗ್ರಾಮಗಳು, ಪಟ್ಟಣ ಹಾಗೂ ನಗರ ಪ್ರದೇಶಗಳು ಸ್ವಚ್ಛವಾಗಿವೆ. ಪೌರಕಾರ್ಮಿಕರು ನಗರವನ್ನು ಸ್ವಚ್ಛವಾಗಿರಿಸಿ ನಮ್ಮೆಲ್ಲರ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದರು.

ಪೌರ ಕಾರ್ಮಿಕರು ತಮ್ಮ ಆರೋಗ್ಯ, ಜೀವವನ್ನು ಲೆಕ್ಕಸಿದೆ ನಗರದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪೌರಾ ಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅವರು ಉನ್ನತ ಸ್ಥಾನಕ್ಕೆ ತಲುಪುವಂತೆ ಮಾಡಬೇಕು ಎಂದು ಸಲಹೆ ನೀಡಿದರು.

ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರಿಂದ ಗಾಯನ, ನೃತ್ಯ ಕಾರ್ಯಕ್ರಮ ನಡೆಯಿತು. ಈ ಸಂದರ್ಭ 66 ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಶಾಸಕ ಟಿ.ಎಸ್.ಶ್ರೀವತ್ಸ, ನಗರ ಪಾಲಿಕೆ ಹೆಚ್ಚುವರಿ ಆಯುಕ್ತೆ ಕುಸುಮ ಕುಮಾರಿ, ಉಪ ಆಯುಕ್ತ ದಾಸೇಗೌಡ, ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ವಲಯ ಆಯುಕ್ತರಾದ ಗಿರೀಶ್, ಸಂದೀಪ್, ಧನುಷ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net