10ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

New Project (19)
Published on

ಕಾಸರಗೋಡು: ಬಂದಡ್ಕ ಗ್ರಾಮೀಣ ಬ್ಯಾಂಕ್‌ನಲ್ಲಿ ಕ್ಯಾಂಟೀನ್ ನಡೆಸುತ್ತಿರುವ ಬೇತಲಂ ಉಂದತ್ತಡ್ಕ ನಿವಾಸಿ ಸವಿತಾ ಎಂಬುವರ ಪುತ್ರಿ ದೇವಿಕಾ(16) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕುಂಡಂಗುಳಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದಳು. ಮೃತದೇಹ ಮಂಗಳವಾರ ಬೆಳಗ್ಗೆ ಮನೆ ಕೊಠಡಿಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವಿನ ಕಾರಣ ತಿಳಿದುಬಂದಿಲ್ಲ. ಬೇಡಡ್ಕ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net