

ಶಿರಸಿ: ಶಾಸ್ತ್ರೀಯ ಸಂಗೀತವು ಪ್ರತಿ ಕಲೆಯ ಮೂಲಗಳೆಂದು ಹಿರಿಯ ತಜ್ಞರು ಉಲ್ಲೇಖಿಸಿದ್ದು, ಜೀವನದ ಸಾಧನೆಗೆ ಹಾಗೂ ವೈಯಕ್ತಿಕ ಪ್ರತಿಭಾ ಪ್ರದರ್ಶನಕ್ಕೆ ಇದೊಂದು ಒಳ್ಳೆಯ ವೇದಿಕೆ ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ ಹೇಳಿದರು.
ಅವರು ನಗರದ ಯೋಗಮಂದಿರ ಸಭಾಭವನದಲ್ಲಿ ಸ್ಥಳೀಯ ರಾಗಮಿತ್ರ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಗುರು ಅರ್ಪಣೆ ಕಲಾ ಅನುಬಂಧ ಸಂಗೀತ ಕಾರ್ಯಕ್ರಮದಲ್ಲಿ ಸಾಧಕ ಕಲಾವಿದರಿಬ್ಬರನ್ನು ಇತ್ತೀಚೆಗೆ ಸನ್ಮಾನಿಸಿ ಮಾತನಾಡಿದರು.
ಬಡಗು ತಿಟ್ಟಿನ ಯಕ್ಷಗಾನ ಕ್ಷೇತ್ರದ ಭಾಗವತಿಕೆಯಲ್ಲಿ ಜನಪ್ರಿಯರಾದ ರಾಮಕೃಷ್ಣ ಹೆಗಡೆ ಹಿಲ್ಲೂರ ಹಾಗೂ ಬಾನ್ಸೂರಿ ವಾದನ ಸಾಧಕ ವಿದ್ವಾನ್ ನಾಗರಾಜ ಹೆಗಡೆ ಶಿರನಾಲಾ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜಿ.ಎಸ್. ಹೆಗಡೆ ಹಲಸರಿಗೆ ಉದ್ಘಾಟಿಸಿದ ಮಾತನಾಡಿದರು.
ಆರ್.ಎನ್. ಭಟ್ಟ ಸುಗಾವಿ, ರಾಗಮಿತ್ರ ಪ್ರತಿಷ್ಠಾನದ ಅಧ್ಯಕ್ಷ ಎಂ.ಎನ್. ಹೆಗಡೆ ಮಾಳೆನಳ್ಳಿ, ಗಿರಿಧರ ಕಬ್ನಳ್ಳಿ ಉಪಸ್ಥಿತರಿದ್ದರು. ಬಳಿಕ ಸಂಗೀತ ಕಾರ್ಯಕ್ರಮ ನಡೆಯಿತು.