

ಕುಶಾಲನಗರ:
ಗುಡ್ಡೆಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೋಟೆಲ್ ಹಾಗೂ ಬಾರ್‌ಗಳಲ್ಲಿ ಸ್ವಚ್ಛತೆಯನ್ನು ಕಾಪಾಡದಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸೋಮವಾರ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್, ಪಿಡಿಓ ಸುಮೇಶ್ ಹಾಗೂ ಆಡಳಿತ ಮಂಡಳಿ ಸದಸ್ಯರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಆಹಾರ ಪದಾರ್ಥಗಳನ್ನು ತಯಾರಿಸುವ ಪಾತ್ರೆಗಳು, ನೀರು ಹಾಗೂ ಅಡುಗೆ ಮನೆಯ ಸ್ವಚ್ಛತೆಯನ್ನು ಪರಿಶೀಲಿಸಲಾಯಿತು. ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸದೆ ಇರುವುದು ಕಂಡುಬAದ ಹಿನ್ನೆಲೆಯಲ್ಲಿ ಕೆಲವು ಹೊಟೇಲ್‌ಗಳಿಗೆ ಸ್ಥಳದಲ್ಲೇ ೫ ಸಾವಿರ ರೂ. ದಂಡ ವಿಧಿಸಿ ವಸೂಲಿ ಮಾಡಲಾಯಿತು.