ಶುದ್ಧ ಕುಡಿಯುವ ನೀರಿನ ಘಟಕ ಪರಿಶೀಲನೆ

IMG20251010202811.jpg
Published on

ಧಾರವಾಡ: ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳಿಂದ ಅಶುದ್ಧ ನೀರು ಸರಬರಾಜು ಆಗುತ್ತಿದೆ ಎಂಬ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಜಿಪಂ ಸಿಇಒ ಭುವನೇಶ ಪಾಟೀಲ ಅವರ ನಿರ್ದೇಶನ ಮೇರೆಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಽಕಾರಿಗಳು ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗ್ರಾಮಸ್ಥರಿಗೆ ಕುಡಿಯುವ ನೀರು ಸರಬರಾಜು ಮಾಡಲು ಮೂರು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದೆ. ಲೋಕೊಪಯೋಗಿ ಇಲಾಖೆಯ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ನೀರು ಸರಬರಾಜು ಪೈಪ್ ಒಡೆದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ಶೀಘ್ರದಲ್ಲಿ ಗ್ರಾಮ ಪಂಚಾಯಿತಿಯಿAದ ಪೈಪ್‌ಲೈನ್ ದುರಸ್ತಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಗ್ರಾಮದ 2 ಶುದ್ಧ ಕುಡಿಯುವ ನೀರಿನ ಘಟಕಗಳಿಂದ ನಿರಂತರವಾಗಿ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಕೆಲವರು ಘಟಕಗಳಿಂದ ಅಶುದ್ಧ ನೀರು ಬರುತ್ತಿದೆ ಎಂದು ದೂರು ನೀಡಿದ್ದರಿಂದ ಸೆ.15 ರಂದು ಮತ್ತು ಅ.9ರಂದು ಈ ಘಟಕಗಳಿಂದ ನೀರಿನ ಮಾದರಿ ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ಕುಡಿಯಲು ಯೋಗ್ಯವಿರುವ ನೀರು ಎಂದು ವರದಿ ಬಂದಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕವಿಲ್ಲದೇ ಕುಡಿಯಲು ಈ ಎರಡು ಘಟಕಗಳ ನೀರನ್ನು ಬಳಸಬಹುದೆಂದು ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತ ಎಚ್.ಪಿ.ರಜಪೂತ ಅವರು ಗ್ರಾಮಸ್ಥರಿಗೆ ತಿಳಿಸಿದರು.

ಅಽಕಾರಿಗಳಾದ ಜಯದೀಪ್ ಪಾಟೀಲ, ಸುಜೀತ್, ಗ್ರಾಪಂ ಕಾರ್ಯದರ್ಶಿ ಶಂಭುಲಿAಗಪ್ಪ ಹೊಸಮನಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net