ನಿಟ್ಟೆ ತಾಂತ್ರಿಕ ಕಾಲೇಜಲ್ಲಿ ಸ್ವಚ್ಛ ಭಾರತ ಅಭಿಯಾನ

blm
Published on

ಕಾರ್ಕಳ: ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದೂರ್ ಶಾಸ್ತ್ರಿ ಅವರಂತಹ ಮಹಾನ್ ನಾಯಕರು ತಮ್ಮ ಜೀವನ ಶೈಲಿಯನ್ನು ಇಂದಿನ ಯುವಕರಿಗೆ ವಾದರಿಯಾಗಿಸಿದವರು ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ನಿರಂಜನ ಎನ್.ಚಿಪ್ಳೂಣ್ಕರ್ ಹೇಳಿದರು.

ನಿಟ್ಟೆ ತಾಂತ್ರಿಕ ಕಾಲೇಜು ರೆಡ್‌ಕ್ರಾಸ್ ಘಟಕ ವತಿಯಿಂದ ಗಾಂಧಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಟ್ಟೆ ತಾಂತ್ರಿಕ ಕಾಲೇಜಿನ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿಟ್ಟೆ ಕಾಲೇಜು ಕ್ಯಾಂಪಸ್ ಸುತ್ತಮುತ್ತ ಸ್ವಚ್ಛಗೊಳಿಸಿದರು. ಕ್ಯಾಂಪಸ್ ಮೇಂಟೆನೆನ್ಸ್ ಮತ್ತು ಡೆವಲಪ್‌ಮೆಂಟ್ ನಿರ್ದೇಶಕ ಪ್ರೊ.ಎ.ಯೋಗೀಶ್ ಹೆಗ್ಡೆ, ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗ ಡೀನ್ ಡಾ.ನರಸಿಂಹ ಬೈಲ್ಕೇರಿ, ಯುವ ರೆಡ್‌ಕ್ರಾಸ್ ಪ್ರಾಧ್ಯಾಪಕ ಸಂಯೋಜಕ ಡಾ.ಜನಾರ್ದನ್ ನಾಯಕ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net