

ಬೆಳ್ತಂಗಡಿ: ಗಾಂಧೀಜಿ ಮತ್ತು ಶಾಸ್ತ್ರೀಜಿ ಸಾತ್ವಿಕ ಬದುಕು ಹಾಗೂ ಆದರ್ಶ ಮೈಗೂಡಿಸಿಕೊಂಡು ನಾಯಕರಾದವರು. ಅಂತಹ ಮಹಾನ್ ವ್ಯಕ್ತಿಗಳ ಜಯಂತಿಯಂದು ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಸ್ತುತ್ಯರ್ಹ ಎಂದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಹೇಳಿದರು.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಹಾಗೂ ರೇಂಜರ್ಸ್ ಮತ್ತು ಜೂನಿಯರ್ ರೆಡ್‌ಕ್ರಾಸ್‌ಗಳ ಸಹಯೋಗದಲ್ಲಿ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ ಅಂಗವಾಗಿ ನಡೆದ ಸ್ವಚ್ಛತಾ ಪ್ರತಿಜ್ಞೆ ಹಾಗೂ ಸ್ವಚ್ಛತಾ ಜಾಥಾ ಹಾಗೂ ಅಭಿಯಾನ ಉದ್ಘಾಟಿಸಿ ಮಾತನಾಡಿದರು.
ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ವಿದ್ಯಾರ್ಥಿಗಳಿಗೆ ಸ್ವಚ್ಛತಾ ಪ್ರತಿಜ್ಞೆ ಬೋಧಿಸಲಾಯಿತು. ಎಲ್ಲ ಸಂಯೋಜಕ ಘಟಕಗಳ ವಿದ್ಯಾರ್ಥಿ ಸ್ವಯಂಸೇವಕರು ಉಜಿರೆಯ ಪರಿಸರದಲ್ಲಿ ಜಾಥಾ ಹಾಗೂ ಅಭಿಯಾನ ನಡೆಸಿ ಸ್ವಚ್ಛತೆ ಕಾರ್ಯ ಮಾಡಿದರು.
ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ರೋವರ್ಸ್ ಹಾಗೂ ರೇಂಜರ್ಸ್ ಅಧಿಕಾರಿಗಳಾದ ಲಕ್ಷ್ಮೀಶ ಭಟ್ ಹಾಗೂ ಅಂಕಿತಾ, ರೆಡ್‌ಕ್ರಾಸ್ ಸಂಯೋಜಕರಾದ ಅರ್ಚನಾ ಹಾಗೂ ಕವನಶ್ರೀ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಕಾರ್ಯಕ್ರಮ ನಿರೂಪಿಸಿದರು.