ಮೇಕೇರಿಯಲ್ಲಿ ಸ್ವಚ್ಛತಾ ಅಭಿಯಾನ

01mdk04
Published on

ಮಡಿಕೇರಿ:

ಮಡಿಕೇರಿ ಬಳಿಯ ಮೇಕೇರಿ ಗ್ರಾಮದಲ್ಲಿ ಶುಕ್ರವಾರ ಬೃಹತ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಸ್ಥಳೀಯ ಸ್ವಾಗತ ಯುವಕ ಸಂಘ, ಸುಭಾಷ್ ನಗರದ ವಿನಾಯಕ ಗೆಳೆಯರ ಬಳಗ ಹಾಗೂ ಮೇಕೇರಿಯ ಮಹಿಳಾ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆದ ಸ್ವಚ್ಛತಾ ಕಾರ್ಯದಲ್ಲಿ ಪುರುಷರು ಮಹಿಳೆಯರಾದಿಯಾಗಿ ಸುಮಾರು 50ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಪಾಲ್ಗೊಂಡು ಸ್ವಚ್ಛಗ್ರಾಮ ಸಂಕಲ್ಪ ಕೈಗೊಂಡರು.

ಸುಭಾಷ್ ನಗರ ಜಂಕ್ಷನ್, ಶಕ್ತಿನಗರ ಜಂಕ್ಷನ್, ಬಿಳಿಗೇರಿ ಜಂಕ್ಷನ್ ಹಾಗೂ ಕಾವೇರಿ ಬಡಾವಣೆಯಿಂದ ಮೇಕೇರಿ ಶಾಲೆವರೆಗೆ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂದರ್ಭ ಮುಖ್ಯ ರಸ್ತೆಯ 2 ಬದಿಗಳಲ್ಲಿ ಪ್ಲಾಸ್ಟಿಕ್, ಮದ್ಯದ ಬಾಟಲಿ, ತಿಂಡಿಪೊಟ್ಟಣಗಳ ತ್ಯಾಜ್ಯ, ನೀರಿನ ಖಾಲಿ ಪ್ಲಾಸ್ಟಿಕ್ ಬಾಟಲಿ ಸೇರಿ 2 ಪಿಕ್ ಅಪ್ ಲೋಡ್ ತ್ಯಾಜ್ಯವನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಇದೇ ಸಂದರ್ಭ ರಸ್ತೆಯ 2 ಬದಿಯ ಕುರುಚಲು ಕಾಡು ಗಿಡಗಳನ್ನು ಕಡಿದು ತೆರವುಗೊಳಿಸಲಾಯಿತು. ಗ್ರಾಮದ ನಾಲ್ಕೂ ದಿಕ್ಕಿನಿಂದ ಸ್ವಚ್ಛತಾ ಕಾರ್ಯದೊಂದಿಗೆ ಶಾಲಾ ಮೈದಾನಕ್ಕೆ ಆಗಮಿಸಿದ ಗ್ರಾಮಸ್ಥರು ಶಾಲಾ ಮೈದಾನ ಹಾಗೂ ಅಂಗನವಾಡಿ ಸುತ್ತಲೂ ಬೆಳೆದು ನಿಂತಿದ್ದ ಗಿಡಗಂಟಿಗಳನ್ನು ತೆರವುಗೊಳಿಸಿ ಮೈದಾನ ಶುಚಿಗೊಳಿಸಿದರು. ಶುಕ್ರವಾರ ಬೆಳಗ್ಗೆ 9 ಗಂಟೆಯಿAದ ಆರಂಭಗೊAಡ ಸ್ವಚ್ಛತಾ ಕಾರ್ಯ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಿತು.

ಈ ಸಂದರ್ಭ ಮಾತನಾಡಿದ ಸ್ವಾಗತ ಯುವಕ ಸಂಘದ ಅಧ್ಯಕ್ಷÀ ಟಿ.ಎನ್. ಉಮೇಶ್, ಮೇಕೇರಿ ಗ್ರಾಮವನ್ನು ಸ್ವಚ್ಛ ಗ್ರಾಮವನ್ನಾಗಿ ಮಾಡಿ ಆ ಮೂಲಕ ಉಳಿದ ಗ್ರಾಮಗಳಿಗೆ ಪ್ರೇರಣೆ ಹಾಗೂ ಮಾದರಿಯಾಗಿಸಬೇಕೆಂಬ ಸದುದ್ದೇಶದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ಹಲವು ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಬೃಹತ್ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮೇಕೇರಿಯ ಸ್ವಾಗತ ಯುವಕ ಸಂಘ, ಸುಭಾಷ್ ನಗರದ ವಿನಾಯಕ ಗೆಳೆಯರ ಬಳಗ ಹಾಗೂ ಮೇಕೇರಿಯ ಮಹಿಳಾ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಉರಿ ಬಿಸಿಲಿನಲ್ಲೂ ಸ್ವಚ್ಛತಾ ಕಾರ್ಯ ಮಾಡಿ ಗಮನಸೆಳೆದರು. ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದವರಿಗೆ ಕುಡಿಯುವ ನೀರು, ಜ್ಯೂಸ್ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಸ್ವಾಗತ ಯುವಕ ಸಂಘದಿAದ ಮಾಡಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net