ಜಿಲ್ಲೆಯಲ್ಲಿ ಐತಿಹಾಸಿಕ ಸ್ಮಾರಕ ಸ್ವಚ್ಛತೆ: ಮಂಡ್ಯ ಜಿಲ್ಲಾ ಪಂಚಾಯಿತಿಯಿಂದ ವಿನೂತನ ಕಾರ್ಯಕ್ರಮ ಅನುಷ್ಠಾನ

Cleaning of historical monuments mandya
Published on

ಮಂಡ್ಯ: ಜಿಲ್ಲೆಯಲ್ಲಿರುವ ಐತಿಹಾಸಿಕ ದೇವಸ್ಥಾನವನ್ನು ಸಂರಕ್ಷಿಸಿ ಸಾರ್ವಜನಿಕರಿಗೆ ಪರಿಚಯಿಸುವ ಉದ್ದೇಶದಿಂದ ನ.19 ರಿಂದ 25 ರವರೆಗೆ ವಿಶ್ವ ಪರಂಪರೆ ಸಪ್ತಾಹ ಎನ್ನುವ ವಿನೂತನ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅನುಷ್ಠಾನಗೊಳಿಸುತ್ತಿದೆ.

‘ನಮ್ಮ ನಡೆ ಪರಂಪರೆ ಕಡೆ, ಬನ್ನಿ ನಮ್ಮ ಪರಂಪರೆಯನ್ನು ಸಂರಕ್ಷಿಸೋಣ’ ಎಂಬ ಶೀರ್ಷಿಕೆಯಡಿ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದು ಸ್ಮಾರಕವನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಮಾತ್ರವಲ್ಲದೆ ಅದರ ಸುತ್ತ ಮುತ್ತಲು ಬೆಳೆದಿರುವ ಗಿಡ ತೆರವುಗೊಳಿಸಿ ಸ್ವಚ್ಛಗೊಳಿಸಲಾಗುವುದು. ಇದರಲ್ಲಿ ಗ್ರಾಪಂ ಸದಸ್ಯರು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ.

ಪ್ರಾಯೋಗಿಕವಾಗಿ ನಾಗಮಂಗಲ ತಾಲೂಕು ಅರಣಿ ಗ್ರಾಮ ಅರಣಿ ಗ್ರಾಮದಲ್ಲಿ ಶುಕ್ರವಾರ ಸ್ವಚ್ಛತೆಗೆ ಚಾಲನೆ ನೀಡಿದ ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್ ಮಾತನಾಡಿ, ಸ್ಮಾರಕಗಳು ನಮ್ಮ ದೇಶದ ಕಲೆ, ಸಂಸ್ಕೃತಿ ಮತ್ತು ಇತಿಹಾಸವನ್ನು ಪರಿಚಯಿಸುತ್ತದೆ. ಗ್ರಾಮದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಮ್ಮ ಪರಂಪರೆ ಉಳಿಸಲು ಕೈಜೋಡಿಸಬೇಕು. ಸ್ವಚ್ಛತೆಯ ನಂತರ ಗ್ರಾಮದ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಪಾರಂಪರಿಕ ದೇವಸ್ಥಾನ ಅಥವಾ ಕಟ್ಟಡವನ್ನು ಅವರಿಗೆ ಪರಿಚಯಿಸಿಕೊಡಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net