ಮಹಾತ್ಮ ಗಾಂಧಿ ಜಯಂತಿ,  ಸಾರ್ವಜನಿಕ ಸ್ಥಳದಲ್ಲಿ ಸ್ವಚ್ಛತೆ

IMG-20251003-WA0006.jpg
Published on

ಹುಬ್ಬಳ್ಳಿ: ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿಯ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ವಾಯವ್ಯ ಸಾರಿಗೆ ಸಂಸ್ಥೆಯ ಸಿಬ್ಬಂದಿಯಿಂದ ಗುರುವಾರ ಸ್ವಚ್ಛತಾ ಅಭಿಯಾನ ನಡೆಯಿತು.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗ್ರಾಮಾಂತರ ವಿಭಾಗದ ವತಿಯಿಂದ ಬಸ್ ನಿಲ್ದಾಣಗಳು ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಇಲ್ಲಿಯ ಹೊಸೂರು ಬಸ್ ನಿಲ್ದಾಣದಲ್ಲಿ ಸ್ವಯಂ ಪ್ರೇರಿತ ಸ್ವಚ್ಛತೆ ಕೈಗೊಳ್ಳಲಾಯಿತು.
ಬಸ್ ಚಾಲಕರು, ನಿರ್ವಾಹಕರು, ತಾಂತ್ರಿಕ ಸಿಬ್ಬಂದಿ, ನಿಲ್ದಾಣದ ಸಾರಿಗೆ ನಿಯಂತ್ರಕರು, ಭದ್ರತಾ ಸಿಬ್ಬಂದಿ, ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು, ಮೇಲ್ವಿಚಾರಕರು, ಅಧಿಕಾರಿಗಳು ನಿಲ್ದಾಣದ ಸ್ವಚ್ಚತಾ ಅಭಿಯಾನದಲ್ಲಿ ಭಾಗಿಯಾದರು.

ನಿಲ್ದಾಣ ಆವರಣದಲ್ಲಿ ಬೆಳೆದಿದ್ದ ಗಿಡಗಂಟಿಗಳನ್ನು ಕಿತ್ತು ಹಾಕಿದರು, ಕಸ- ಕಡ್ಡಿಗಳನ್ನು ಸಂಗ್ರಹಿಸಿದರು, ನೆಲ ಗುಡಿಸಿದರು. ಪರಿಸರವನ್ನು ಸ್ವಚ್ಚಗೊಳಿಸಿದರು.

ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಮಾತನಾಡಿ, ಬಸ್ ನಿಲ್ದಾಣಗಳಲ್ಲಿ ನಿರಂತರವಾಗಿ ಸ್ವಚ್ಛತೆಯನ್ನು ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಸ್ಥೆಯ ಉಪಕ್ರಮಗಳಿಗೆ ಸಾರ್ವಜನಿಕರು ಕೈಜೋಡಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.

ವಿಭಾಗೀಯ ಸಂಚಾರ ಅಧಿಕಾರಿ ವೈ.ಎಂ. ಶಿವರಡ್ಡಿ, ವಿಭಾಗೀಯ ತಾಂತ್ರಿಕ ಇಂಜಿನಿಯರ್ ದೀಪಕ ಜಾಧವ, ಆಡಳಿತಾಧಿಕಾರಿ ರಾಜೇಂದ್ರ, ಡಿಪೋ ಮ್ಯಾನೇಜರ್ ಗಳಾದ ವಿಜಯಕುಮಾರ ಕುಮಠಳ್ಳಿ, ಅನಿಲಕುಮಾರ ಹಳ್ಳದ, ನಿಲ್ದಾಣಾಧಿಕಾರಿ ಸುಭಾಸ ಲಂಕೆಣ್ಣವರ, ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net