

ಕಡಬ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಡಬ ತಾಲೂಕು ವಲಯದ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಕಾರ್ಯ ನಡೆಯಿತು.
ಶ್ರೀ ಸಿದ್ಧಿವಿನಾಯಕ ಭಜನಾ ಮಂದಿರ ದೊಡ್ಡ ಕೊಪ್ಪ, ಶ್ರೀ ಕಂಠೇಶ್ವರ ಮಹಾಗಣಪತಿ ದೇವಸ್ಥಾನ ಕಡಬ, ಶ್ರೀರಾಮ ಭಜನಾ ಮಂದಿರ ಕೋಡಿಂಬಾಳ, ಕಳಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅಯ್ಯಪ್ಪ ಭಜನಾ ಮಂದಿರ ರೇಂಜಿಲಾಡಿ, ಶ್ರೀ ಉಮಾಮಹೇಶ್ವರಿ ದೇವಸ್ಥಾನ ಬಲ್ಯ, ನೂಜಿಬಾಳ್ತಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಮಹಾವಿಷ್ಣು ದೇವಸ್ಥಾನ ಪಿಜಕಳ, ಆದಿನಾಗಬ್ರಹ್ಮ ಮುಗೇರ್ ಮತ್ತು ಪರಿವಾರ ದೈವಸ್ಥಾನ ಕಕ್ಕೇನಡ್ಕ ಸೇರಿದಂತೆ ಮೊದಲಾದ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಸಮಿತಿ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು, ಊರಿನವರು, ಒಕ್ಕೂಟ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು. ವಲಯದ ಮೇಲ್ವಿಚಾರಕ ವಿಜೇಶ್ ಜೈನ್ ಮಾರ್ಗದರ್ಶನ ನೀಡಿದರು.