

ಸುಬ್ರಹ್ಮಣ್ಯ: ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್, ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಸಹಯೋಗದೊಂದಿಗೆ ಕುಮಾರಧಾರಾದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ತನಕ ರಸ್ತೆ ಬದಿವರೆಗೆ ಸ್ವಚ್ಛತಾ ಕಾರ್ಯಕ್ರಮ ಸೋಮವಾರ ನಡೆಯಿತು.
ರಸ್ತೆ ಇಕ್ಕೆಲದಲ್ಲಿ, ವಾಹನ ಪಾರ್ಕಿಂಗ್, ಶೌಚಗೃಹ ಬಳಿ ಹಾಗೂ ಇನ್ನಿತರ ಸ್ಥಳಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಚೀಲಗಳು, ಬಾಟಲಿಗಳು, ಕಸ ಕಡ್ಡಿ ಹೆಕ್ಕಿ ಸ್ವಚ್ಛ ಮಾಡಲಾಯಿತು. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್‌ನ 60 ಸ್ವಯಂಸೇವಕರು ಭಾಗವಹಿಸಿದ್ದರು. ದೇಗುಲದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಟ್ರಸ್ಟ್ ಸಂಸ್ಥಾಪಕ ಡಾ.ರವಿ ಕಕ್ಕೆಪದವು, ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ಸ್ಥಾಪಕಾಧ್ಯಕ್ಷ ವಿಶ್ವನಾಥ ನಡುತೋಟ ಉಪಸ್ಥಿತರಿದ್ದರು.