ಬಿಜೆಪಿ ಕಾರ್ಯಕರ್ತರಿದಂದ ಕೋದಂಡರಾಮ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

2
Published on

ಮೈಸೂರು: ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಗೊಳ್ಳುವ ಹಿನ್ನೆಲೆಯಲ್ಲಿ ನಗರದ ಪುರಾತನ ದೇವಾಲಯಗಳನ್ನು ಭಾನುವಾರ ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸಿದರು.

ಆಯಾ ನಗರ ಮತ್ತು ಪಟ್ಟಣಗಳ ಪುರಾತನ ದೇವಾಲಯಗಳನ್ನು ಸ್ವಚ್ಛಗೊಳಿಸಲು ಬಿಜೆಪಿ ಕರೆ ನೀಡಿರುವ ಹಿನ್ನೆಲೆಯಲ್ಲಿ ನಗರ ಬಿಜೆಪಿ ಘಟಕವು ನಗರದ ಪುರಾತನ ಕೋದಂಡರಾಮ ದೇವಸ್ಥಾನದಲ್ಲಿ ಸ್ವಚ್ಛತೆ ಕಾರ್ಯ ಕೆಗೊಂಡಿತು.

ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಟಿ.ಎಸ್. ಶ್ರೀವತ್ಸ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು. ನಗರದ ಎಂ.ಜಿ. ರಸ್ತೆಯ ಕೋದಂಡರಾಮ ದೇವಸ್ಥಾನದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಸ್ವಚ್ಛತಾ ಕಾರ್ಯ ನೆರವೇರಿತು. ಕೋದಂಡರಾಮನಿಗೆ ವಿಶೇಷ ಪೂಜೆ ಸಲ್ಲಿಸಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಯಶಸ್ವಿ ಸೋಮಶೇಖರ್, ನಗರ ಪಾಲಿಕೆ ಮಾಜಿ ಸದಸ್ಯ ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net