ಸಿದ್ದಪ್ಪಜ್ಜನ ಮಠದಲ್ಲಿ ಸ್ವಚ್ಛತಾ ಕಾರ್ಯ

h15-Siddapajja 1
Published on

ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ನಿಮಿತ್ತ ಇಲ್ಲಿಯ ಉಣಕಲ್‌ನ ಶ್ರೀಸಿದ್ದಪ್ಪಜ್ಜನವರ ಮೂಲ ಗದ್ದುಗೆ ಮಠದಲ್ಲಿ ಸೋಮವಾರ ಸ್ವಚ್ಛತಾ ಕಾರ್ಯ ನಡೆಯಿತು.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಮಠದ ಆವರಣದಲ್ಲಿ ನಡೆಸಿದ ಸ್ವಚ್ಛತಾ ಅಭಿಯಾನದಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು. ಬೆಳಗ್ಗೆಯಿಂದ ಶ್ರೀಮಠ, ಮಠದ ಆವರಣದಲ್ಲಿ ಸ್ವಚ್ಛತೆ, ನೀರಿನಿಂದ ಬಂಡೆ ತೊಳೆಯುವ ಕಾರ್ಯ ನಡೆಯಿತು.
ನಂತರ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಮೀಪದ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ದೇವಸ್ಥಾನಗಳಲ್ಲಿ ಈ ಕಾರ್ಯಕ್ರಮ ನಡಿಯುತ್ತಿದೆ ಎಂದರು.
ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ಸಂತೋಷ ಚವ್ಹಾಣ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net