ಕೋಲಸಿರ್ಸಿ ಗ್ರಾಪಂನಿಂದ ಸ್ವಚ್ಛತಾ ಕಾರ್ಯ

26sdp1
Published on

ಸಿದ್ದಾಪುರ: ತಾಲೂಕಿನ ಕೋಲಸಿರ್ಸಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಗ್ರಾಪಂ ವ್ಯಾಪ್ತಿಯ ಶಿರಸಿ-ಸಿದ್ದಾಪುರ ರಾಜ್ಯ ಹೆದ್ದಾರಿಯ ಮಂಡ್ಲಿಕೊಪ್ಪದಿಂದ ಕುಣಜಿ ಬಸ್ ನಿಲ್ದಾಣದವರೆಗಿನ ಅಂದಾಜು 2.5ಕಿಮೀ ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.

ಸ್ವಚ್ಛತಾ ಕಾರ್ಯವನ್ನು ಗ್ರಾಪಂನ ಅಧ್ಯಕ್ಷರ, ಉಪಾಧ್ಯಕ್ಷರ ಹಾಗೂ ಸದಸ್ಯರುಗಳ ಮಾರ್ಗದರ್ಶನದಲ್ಲಿ ಗ್ರಾಪಂ ಪಿಡಿಒ ಸುಬ್ರಹ್ಮಣ್ಯ ಹೆಗಡೆ, ಕಾರ್ಯದರ್ಶಿ ಪ್ರವೀಣ ಹೆಗಡೆ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ತಾಪಂ ಇಒ ದೇವರಾಜ ಹಿತ್ತಲಕೊಪ್ಪ ಭೇಟಿ ನೀಡಿ ಪರಿಶೀಲಿಸಿದರು. ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ನಡೆಸಲಾಗುವುದು. ಸಾರ್ವಜನಿಕರು ಪ್ಲಾಸ್ಟಿಕ್ ಕಸ, ಬಾಟಲಿ, ಮತ್ತಿತರ ಕಸವನ್ನು ಕಂಡಕಂಡಲ್ಲಿ ಎಸೆಯದೇ ಗ್ರಾಪಂನ ಸ್ವಚ್ಛವಾಹಿನಿಗೆ ನೀಡಿ ಪರಿಸರ ಸ್ವಚ್ಛವಾಗಿಡಲು ಸಹಕರಿಸಬೇಕು ಎಂದು ಗ್ರಾಪಂ ಪಿಡಿಒ ಸುಬ್ರಹ್ಮಣ್ಯ ಹೆಗಡೆ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net