ಕನಕಮಜಲಿನಲ್ಲಿ ಸ್ವಚ್ಛತಾ ಕಾರ್ಯ

amara
Published on

ಸುಳ್ಯ : ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತೆಯೇ ಸೇವೆ ಕಾರ್ಯಕ್ರಮದ ಪ್ರಯುಕ್ತ ಸ್ವಚ್ಛತಾ ಕಾರ್ಯ ಕನಕಮಜಲಿನಲ್ಲಿ ಅ.2ರಂದು ನಡೆಯಿತು. ಕನಕಮಜಲು ಗ್ರಾ.ಪಂ. ವಠಾರದಲ್ಲಿ ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬಳಿಕ ಕನಕಮಜಲು ಪೇಟೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕಾರ್ಯದರ್ಶಿ ರಮೇಶ್ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net