ಕರಿಘಟ್ಟ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ

ಎಸ್ ಆರ್ ಪಿ 21-3
ಕರಿಘಟ್ಟ ಬೆಟ್ಟದಲ್ಲಿ ಭಾನುವಾರ ಮೈಸೂರು ಜಿಲ್ಲೆಯ ಕಡಕೊಳದ ಕಡಕೊಳದ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜು ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.
Published on

ಶ್ರೀರಂಗಪಟ್ಟಣ: ತಾಲೂಕಿನ ಪುರಾಣ ಪ್ರಸಿದ್ಧ ಕರಿಘಟ್ಟ ಬೆಟ್ಟದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸಿದರು.


ಪಟ್ಟಣದ ರೋಟರಿ ಸಂಸ್ಥೆ ಹಾಗೂ ಅಚೀವರ್ಸ್ ಅಕಾಡೆಮಿ ಸಹಯೋಗದೊಂದಿಗೆ ಮೈಸೂರು ಜಿಲ್ಲೆಯ ಕಡಕೊಳದ ಶೇಷಾದ್ರಿಪುರಂ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಿದ್ಯಾರ್ಥಿಗಳು ಭಾನುವಾರ ಪ್ಲಾಸ್ಟಿಕ್ ಮುಕ್ತ ಕರಿಘಟ್ಟ ಹಾಗೂ ಸದೃಢ ದೇಹಕ್ಕಾಗಿ ಶ್ರಮದಾನ ಎಂಬ ಧ್ಯೇಯದೊಂದಿಗೆ ಕರಿಘಟ್ಟ ಬೆಟ್ಟದ ಶ್ರೀವೆಂಕಟರಮಣಸ್ವಾಮಿ ದೇವಾಲಯ ಸುತ್ತಮುತ್ತ ಗಿಡಗಂಟಿ, ಕಸ, ಪ್ಲಾಸ್ಟಿಕ್ ಖಾಲಿ ಬಾಟಲಿಗಳನ್ನು ತೆರವುಗೊಳಿಸಿದರು. ರಾಷ್ಟ್ರಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ನಿರ್ದೇಶಕ ಡಾ.ಆರ್.ರಾಘವೇಂದ್ರ ನೇತೃತ್ವ ವಹಿಸಿದ್ದರು.

ರೋಟರಿ ಸಂಸ್ಥೆಯ ಪದಾಧಿಕಾರಿಗಳು ಮತ್ತು ಅಚೀವರ್ಸ್ ಅಕಾಡೆಮಿ ಸದಸ್ಯರು ಸಾಥ್ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳಾದ ಕರ್ಣ, ಹೃದಯ್, ದರ್ಶನ್, ಪುನೀತ್, ಅನನ್ಯಾ, ಧನುಷ್, ಪೂರ್ವಜ್, ಮನು, ಪಾಲಳ್ಳಿ ರವಿ ಇತರರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net