ಮಾರಿಕಾಂಬ ದೇಗುಲದಲ್ಲಿ ಸ್ವಚ್ಛತಾ ಕಾರ್ಯ

05 yelandur 01
ಯಳಂದೂರು ತಾಲೂಕಿನ ಯರಿಯೂರು ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಸಾಂಕೇತಿಕವಾಗಿ ಮಹಿಳೆಯರು ಸ್ವಚ್ಛತೆ ಕಾರ್ಯ ನಡೆಸಿದರು.
Published on

ಯಳಂದೂರು: ತಾಲೂಕಿನ ಯರಿಯೂರು ಗ್ರಾಮದಲ್ಲಿ ಶುಕ್ರವಾರ ಶ್ರೀ ಮಾರಿಕಾಂಬ ದೇವಸ್ಥಾನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಸಂಸ್ಥೆಯ ವಲಯ ಮೇಲ್ವಿಚಾರಕ ಪ್ರಸನ್ನ ಮಾತನಾಡಿ, ಸ್ವಚ್ಛತೆ ವಿಚಾರದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳವು ದೇಶದಲ್ಲಿಯೇ ಗುರುತಿಸಿಕೊಂಡಿದೆ. ಅದೇ ರೀತಿಯಾಗಿ ನಮ್ಮ ಸುತ್ತಮುತ್ತಲೂ ಇರುವ ಗ್ರಾಮೀಣ ಭಾಗದ ಧಾರ್ಮಿಕ ಶ್ರದ್ಧಾ ಕೇಂದ್ರಗಳು, ಶಾಲೆಗಳು, ಮಸೀದಿಗಳು, ಬಸದಿಗಳು, ಸಮುದಾಯ ಭವನಗಳು, ನೀರಿನ ಟ್ಯಾಂಕ್‌ಗಳ ಬಳಿ ಹಾಗೂ ಜನ ಹೆಚ್ಚಾಗಿ ಸೇರುವ ಪ್ರದೇಶಗಳನ್ನು ಶುಚಿಯಿಂದ ಇಟ್ಟುಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದರು.

ಸ್ಥಳೀಯ ಸ್ವಸಹಾಯ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳಾದ ಮಹಾದೇವಮ್ಮ ಮತ್ತು ಪವಿತ್ರಾ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net