ನಿಟ್ಟೂರು ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ

ನಿಟ್ಟೂರು ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ
Published on

ಗೋಣಿಕೊಪ್ಪ: ನಿಟ್ಟೂರು ಗ್ರಾಮ ಪಂಚಾಯಿತಿ, ಪವಿ ಸ್ವಯಂ ಸೇವಾ ಟ್ರಸ್ಟ್, ಶಿವಶಕ್ತಿ ಸ್ವಸಹಾಯ ಸಂಘ ಕಾರ್ಮಾಡು, ನಿಟ್ಟೂರು ಗ್ರಾಮದ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದೊಂದಿಗೆ ನಿಟ್ಟೂರು ಮುಖ್ಯ ರಸ್ತೆ ಹಾಗೂ ವಿವಿಧ ಭಾಗದಲ್ಲಿ ಮಂಗಳವಾರ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು.

ರಸ್ತೆಗಳ ಬದಿ ಎಸೆದಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಸಾರ್ವಜನಿಕರಿಗೆ ಎಲ್ಲೆಂದರಲ್ಲಿ ಕಸ ಎಸೆಯದಂತೆ ಹಾಗೂ ಬಟ್ಟೆಯ ಬ್ಯಾಗ್ ಬಳಸುವಂತೆ ಅರಿವು ಮೂಡಿಸಲಾಯಿತು.

ಪವಿ ಸ್ವಯಂ ಸೇವಾ ಸಂಸ್ಥೆಯ ಸಂಚಾಲಕಿ ಅಳಮೇಂಗಡ ಮಾಳವಿಕಾ ಮಾತನಾಡಿ, ಕಸವನ್ನು ಸಿಕ್ಕಸಿಕ್ಕಲ್ಲಿ ಎಸೆಯದೆ ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಬೇಕು. ಪರಿಸರ ಸ್ವಚ್ಛತೆ ಪಾಠವನ್ನು ಮಕ್ಕಳಿಗೆ ಮನೆಯಿಂದಲೇ ಕಲಿಸಬೇಕು. ಸ್ವಚ್ಛತಾ ಅಭಿಯಾನದಲ್ಲಿ ಮನೆಯಿಂದ ಒಬ್ಬರಾದರೂ ಪಾಲ್ಗೊಳ್ಳುವಂತಾಗಬೇಕು ಎಂದರು.

ನಿಟ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಮ್ಮಣಿ, ಉಪಾಧ್ಯಕ್ಷ ಚಕ್ಕೇರ ಅಯ್ಯಪ್ಪ, ಸದಸ್ಯ ಕಾಟಿಮಾಡ ಶರೀನ್ ಮುತ್ತಣ್ಣ, ಪಡಿಞರಂಡ ಕವಿತಾ ಪ್ರಭು, ಅಮ್ಮಯ್ಯ, ರಾಜು, ಶಿವಶಕ್ತಿ ಸ್ವಸಹಾಯ ಸಂಘದ ಸಂಚಾಲಕಿ ಕವಿತಾ, ಸಂಜೀವಿನಿ ಒಕ್ಕೂಟದ ಪ್ರಮುಖರಾದ ಅಳಮೇಂಗಡ ಲಕ್ಷ್ಮೀರಾಜಪ್ಪ, ಬೊಟ್ಪಂಗಡ ಸೀಮಾ, ಪೊನ್ನಿಮಾಡ ವಾಣಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net