ಆಸ್ಪತ್ರೆ ಆವರಣದಲ್ಲಿ ಸ್ವಚ್ಛತಾ ಕಾರ್ಯ

Cleaning work in the hospital premises
Published on

ಕುಶಾಲನಗರ:

ಸ್ವಚ್ಛತಾ ಸಪ್ತಾಹದ ಅಂಗವಾಗಿ ಕುಶಾಲನಗರ ತಾಲೂಕು ಕೂಡಿಗೆಯ ಸರ್ಕಾರಿ ಆಸ್ಪತ್ರೆಯ ಆವರಣವನ್ನು ಆಶಾ ಕಾರ್ಯಕರ್ತರು ಹಾಗೂ ವೈದ್ಯ ಸಿಬ್ಬಂದಿ ಶನಿವಾರ ಶುಚಿಗೊಳಿಸಿದರು. ಆಸ್ಪತ್ರೆಯ ಆವರಣದಲ್ಲಿ ಹರಡಿದ್ದ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಆಯ್ದು ಸ್ವಚ್ಛಗೊಳಿಸಿದ ಸಿಬ್ಬಂದಿ ಸಾಮೂಹಿಕವಾಗಿ ಸ್ವಚ್ಛತಾ ಪ್ರತಿಜ್ಞೆಗೈದರು.

ಆಶಾ ಕಾರ್ಯಕರ್ತರ ಮೇಲ್ವಿಚಾರಕಿ ಗೀತಾ ಸ್ವಚ್ಛತಾ ಪ್ರತಿಜ್ಞೆ ಬೋಧಿಸಿದರು. ಈ ಸಂದರ್ಭ ಆರೋಗ್ಯ ಕೇಂದ್ರದ ವೈದ್ಯೆ ಡಾ. ದೀಪಿಕಾಮೂರ್ತಿ, ಪ್ರಥಮ ದರ್ಜೆ ಸಹಾಯಕ ಚಂದ್ರೇಶ್, ಸಿಬ್ಬಂದಿ ಮಂಜುನಾಥ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net