ವಿಷ್ಣು ಸಮುದ್ರ ಕಲ್ಯಾಣಿಯಲ್ಲಿ ಸ್ವಚ್ಛತಾ ಕಾರ್ಯ

IMG-20240121-WA0023
Published on

ಬೇಲೂರು: ನೀರನ್ನು ಮಿತವಾಗಿ ಬಳಸಿ ಉಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ಯುದ್ಧವೇ ನಡೆಯಬಹುದು. ಈಗಿನಿಂದಲೇ ನೀರು ಪೋಲಾಗದಂತೆ ಎಲ್ಲರೂ ಎಚ್ಚರ ವಹಿಸಬೇಕು ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಹೇಳಿದರು.

ಪಟ್ಟಣದ ವಿಷ್ಣು ಸಮುದ್ರ ಕಲ್ಯಾಣಿಯಲ್ಲಿ ಭಾನುವಾರ ಹಸಿರು ಭೂಮಿ ಪ್ರತಿಷ್ಠಾನ ಹಾಗೂ ಪುರಸಭೆಯಿಂದ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕಲ್ಯಾಣಿಗೆ ಪ್ಲಾಸ್ಟಿಕ್, ಬಟ್ಟೆ, ಇತರ ವಸ್ತುಗಳನ್ನು ಹಾಕುತ್ತಿರುವುದರಿಂದ, ನೀರಿನ ಮೂಲ ಹಾಳಾಗುತ್ತಿದೆ. ಇದು ಹೀಗೆ ಮುಂದುವರಿದರೆ ಭವಿಷ್ಯದಲ್ಲಿ ಜೀವಜಲ ಸಮಸ್ಯೆ ಕಾಡಾಡಲಿದೆ. ಆದ್ದರಿಂದ ಕಲ್ಯಾಣಿ ಸ್ವಚ್ಛತೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕೋರಿದರು.

ಹಸಿರು ಭೂಮಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಸೌಭಾಗ್ಯಾ, ಮುಖಂಡ ಅಂಥೋಣಿ ಸ್ವಾಮಿ, ಪುರಸಭೆ ಆರೋಗ್ಯಾಧಿಕಾರಿ ಲೋಹಿತ್, ಸಮಾಜ ಸೇವಕರಾದ ನೂರ್ ಅಹಮದ್, ಸಂಪತ್, ಪುರಸಭೆ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net