14ರಿಂದ ಜಿಲ್ಲೆಯ ದೇವಸ್ಥಾನಗಳ ಸ್ವಚ್ಛತೆ ಕಾರ್ಯ

bjp dist president T.D. Megharaj
ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್
Published on

ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರ ಉದ್ಘಾಟನೆ ಆಗುತ್ತಿರುವ ಹಿನ್ನೆಲೆಯಲ್ಲಿ ಜ.14ರಿಂದ 21ರವರೆಗೆ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲೂ ಸ್ವಚ್ಛತಾ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.

ಆರ್‌ಎಸ್‌ಎಸ್ ಮತ್ತು ಸಂಘ ಪರಿವಾರದವರು ಈಗಾಗಲೇ ಮನೆ ಮನೆಗೆ ಮಂತ್ರಾಕ್ಷತೆ, ಕರಪತ್ರ ವಿತರಣೆ, ರಾಮನ ಭಾವಚಿತ್ರ ನೀಡಲಾಗುತ್ತಿದೆ. ಹಾಗಾಗಿ 14ರಿಂದ ಎಲ್ಲ ಗ್ರಾಮ, ನಗರ, ವಾರ್ಡ್‌ಗಳಲ್ಲಿನ ದೇವಸ್ಥಾನಗಳಲ್ಲಿ ಕಾರ್ಯಕರ್ತರು ಸ್ವಚ್ಛತಾ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
14ರಂದು ಬೆಳಗ್ಗೆ 8ಕ್ಕೆ ಹೊಳೆಹೊನ್ನೂರು ರಸ್ತೆಯ ಅರಕೇಶ್ವರ ದೇವಸ್ಥಾನದಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಮತ್ತು ನಗರ ಅಧ್ಯಕ್ಷ ಎನ್.ಕೆ.ಜಗದೀಶ್ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಎಂಎಲ್‌ಸಿಗಳಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಮತ್ತಿತರರು ಪಾಲ್ಗೊಳ್ಳುವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net