ದೇವಾಲಯಗಳಲ್ಲಿ ಸ್ವಚ್ಛತಾ ಕಾರ್ಯ ಆರಂಭ

19 ckm 4
ಚಿಕ್ಕಮಗಳೂರಿನ ಹಿರೇಮಗಳೂರಿನಲ್ಲಿ ಸ್ವಚ್ಛತೀರ್ಥ ಅಭಿಯಾನದ ಹಿನ್ನೆಲೆಯಲ್ಲಿ ಶ್ರೀ ಕೋದಂಡರಾಮೇಶ್ವರ ದೇವಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
Published on

ಚಿಕ್ಕಮಗಳೂರು: ಅಯೋಧ್ಯೆಯಲ್ಲಿ ಜ.22ರಂದು ಶ್ರೀ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದೇವಾಲಯಗಳ ಸ್ವಚ್ಛತೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಿರ್ಧರಿಸಿರುವುದರಿಂದ ನಗರದ ಎಲ್ಲ ದೇವಾಲಯಗಳ ಸ್ವಚ್ಛತಾ ಕಾರ್ಯ ಆರಂಭಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಹೇಳಿದರು.
ಪೌರಾಡಳಿತ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರಸಭೆ ಆಶ್ರಯದಲ್ಲಿ ಹಿರೇಮಗಳೂರಿನಲ್ಲಿ ಆಯೋಜಿಸಿದ್ದ ಸ್ವಚ್ಛತೀರ್ಥ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜ.21ರೊಳಗೆ ಎಲ್ಲ ದೇವಾಲಯಗಳನ್ನು ಸ್ವಚ್ಛಗೊಳಿಸಿ ಹೋಮ ಹವನ ನೆಡೆಸಲಾಗುವುದು. ಅದರ ಭಾಗವಾಗಿ ಹಿರೇಮಗಳೂರಿನ ಶ್ರೀ ಕೋದಂಡರಾಮ ದೇವಾಲಯದಿಂದ ಅಭಿಯಾನ ಪ್ರಾರಂಭಿಸಲಾಗಿದೆ. ನಗರದ ಎಲ್ಲ ದೇವಸ್ಥಾನಗಳನ್ನು ನಗರಸಭೆಯಿಂದ ಸ್ವಚ್ಚಗೊಳಿಸಿ, ಸ್ವಚ್ಚ ತೀರ್ಥ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net