ಕೊಡಗು ಸೈನಿಕ ಶಾಲೆ ವಿದ್ಯಾರ್ಥಿಗಳಿಂದ ಸ್ವಚ್ಛತೆ

Cleanliness by Kodagu Sainik School students
Published on

ಕುಶಾಲನಗರ:

ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಕೂಡಿಗೆಯ ಕೊಡಗು ಸೈನಿಕ ಶಾಲೆ ಎನ್.ಸಿ.ಸಿ. ಘಟಕದ ವತಿಯಿಂದ ಕೂಡಿಗೆ ಗ್ರಾಮದಲ್ಲಿ ಮಂಗಳವಾರ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಸೈನಿಕ ಶಾಲೆಯಿಂದ ಆರಂಭವಾದ ಕಾರ್ಯಕ್ರಮ ಕೂಡಿಗೆ ಪಟ್ಟಣದ ವರೆಗೂ ಹಮ್ಮಿಕೊಳ್ಳಲಾಗಿತ್ತು. ಈ ಸ್ವಚ್ಛತಾ ಅಭಿಯಾನದಲ್ಲಿ ಎನ್‌ಸಿಸಿ ಘಟಕದ ಎಲ್ಲಾ ಅಧಿಕಾರಿಗಳು ಹಾಗೂ ಶಾಲೆಯ 560ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕೂಡಿಗೆ ಮತ್ತು ಕೂಡುಮಗಳೂರು ಗ್ರಾಮ ಪಂಚಾಯಿತಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಈ ಸಂದರ್ಭ ಇದ್ದರು. ಕೂಡಿಗೆ, ಹಳೆ ಕೂಡಿಗೆ ಹಾಗೂ ಕೂಡುಮಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ನಡೆಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net