

ಮಡಿಕೇರಿ: ಎನ್‌ಸಿಸಿ ದಿನಾಚರಣೆ ಅಂಗವಾಗಿ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳು ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಪ್ರತಿಮೆಯನ್ನು ಸ್ವಚ್ಛಗೊಳಿಸಿದರು.
ನಗರದ ಮೈಸೂರು ರಸ್ತೆಯಲ್ಲಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿಯಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರತಿಮೆಯನ್ನು ಶುಚಿಗೊಳಿಸಿ, ಈ ವ್ಯಾಪ್ತಿಯಲ್ಲಿದ್ದ ಕಾಡು ಗಿಡಗಳನ್ನು ಕಡಿದು, ಕುರಚಲು ಗಿಡಗಳನ್ನು ತೆರವುಗೊಳಿಸಲಾಯಿತು. ೪೦ ಕೆಡೆಟ್‌ಗಳು ಪಾಲ್ಗೊಂಡಿದ್ದ ಸ್ವಚ್ಚತಾ ಅಭಿಯಾನದಲ್ಲಿ ಕೊಡಗು ವಿದ್ಯಾಲಯದ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರಾ ಆಡಳಿತಾಧಿಕಾರಿ ಪಿ.ರವಿ, ಎನ್‌ಸಿಸಿ ಅಧಿಕಾರಿ ದಾಮೋದರ ಪಾಲ್ಗೊಂಡಿದ್ದರು.