ಸೈನಿಕ ಶಾಲೆಯ ಎನ್‌ಸಿಸಿ ಘಟಕದಿಂದ ಸ್ವಚ್ಛತಾ ಅಭಿಯಾನ

01Kush02
Published on

ಕುಶಾಲನಗರ: ಮಹಾತ್ಮ ಗಾಂಧೀಜಿ ಜನ್ಮ ದಿನಾಚರಣೆ ಅಂಗವಾಗಿ ಕೂಡಿಗೆ ಸೈನಿಕ ಶಾಲೆಯ ಎನ್‌ಸಿಸಿ ಘಟಕದಿಂದ ಇತ್ತೀಚೆಗೆ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.

ಕೂಡಿಗೆ ಮುಖ್ಯ ರಸ್ತೆ, ಡಯಟ್‌ನ ಕ್ರೀಡಾಂಗಣ, ಪ್ರಾಥಮಿಕ ಆರೋಗ್ಯ ಕೇಂದ್ರ ಆವರಣ, ಸುಬ್ರಹ್ಮಣ್ಯ ದೇವಸ್ಥಾನ ರಸ್ತೆ, ಮಾರುಕಟ್ಟೆ ಆವರಣ, ಹಾರಂಗಿ ಸೇತುವೆ, ಸೋಮವಾರಪೇಟೆ ರಸ್ತೆಗಳಲ್ಲಿ ಸ್ವಚ್ಛತಾ ಕಾರ್ಯನಡೆಸಲಾಯಿತು.

ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಪ್ರತಿಯೊಬ್ಬರೂ ಸ್ವಚ್ಛ ಗ್ರಾಮದ ಕನಸು ಕಾಣಬೇಕು. ವಿದ್ಯಾರ್ಥಿಗಳು ತಮ್ಮ ದೈನಂದಿನ ಬದುಕಿನಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಇತರರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ ಪ್ರಕಾಶ್ ರಾವ್, ಎನ್‌ಸಿಸಿ ಘಟಕದ ಅಧಿಕಾರಿಗಳು, ಸೈನಿಕ ಶಾಲೆಯ 200ಕ್ಕೂ ಅಧಿಕ ವಿದ್ಯಾರ್ಥಿಗಳು, ಕೂಡುಮಗಳೂರು ಗ್ರಾಮ ಪಂಚಾಯಿತಿ ಪದಾಧಿಕಾರಿಗಳು ಹಾಗೂ ಅಭಿವೃದ್ಧಿ ಅಧಿಕಾರಿ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net