ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರಮದಾನ

01Kush03
Published on

ಕುಶಾಲನಗರ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 154ನೇ ಜಯಂತಿ ಅಂಗವಾಗಿ ಸಮೀಪದ ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಸ್ವಚ್ಛತಾ ಹಿ ಸೇವಾ ಅಭಿಯಾನದಡಿ ಸ್ವಚ್ಛತಾ ಶ್ರಮದಾನ ನಡೆಯಿತು.

ಶಾಲಾವರಣ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ತೆರವುಗೊಳಿಸುವ ಮೂಲಕ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿದರು. ವಿದ್ಯಾರ್ಥಿಗಳಿಗೆ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸ್ವಚ್ಛತೆಯೇ ಸೇವೆ ಆಂದೋಲನವು ಸ್ವಚ್ಛತಾ ಕಾರ್ಯದಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶ ಹೊಂದಿದೆ ಎಂದರು. ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯಾ ಸ್ವಚ್ಛತೆ ಕುರಿತು ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ದಯಾನಂದ ಪ್ರಕಾಶ್ ಅವರು ಸ್ವಚ್ಛತಾ ಅಭಿಯಾನದಲ್ಲಿ ನಾಗರಿಕರ ಸಹಭಾಗಿತ್ವ ಕುರಿತು ಮಾತನಾಡಿದರು.

ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತಾ, ಎಸ್.ಎಂ.ಗೀತಾ, ಬಿ.ಎಸ್.ಅನ್ಸಿಲಾ ರೇಖಾ, ಸಮನ್ವಯ ಸಂಪನ್ಮೂಲ ಶಿಕ್ಷಕಿ ಟಿ.ವಿ.ಶೈಲಾ ಇದ್ದರು. ಇದಕ್ಕೂ ಮುನ್ನ ಸ್ವಚ್ಛತಾ ಆಂದೋಲನ ಜಾಗೃತಿ ಜಾಥಾ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net