ಕುಂದಾಪುರದಲ್ಲಿ ಸ್ವಚ್ಛತಾ ಅಭಿಯಾನ

shibira
ಕುಂದಾಪುರದಲ್ಲಿ ವಿವಿಧ ಸಂಸ್ಥೆಗಳ ಆಶ್ರಯದಲ್ಲಿ 249ನೇ ಸ್ವಚ್ಛತಾ ಅಭಿಯಾನ ನಡೆಯಿತು.
Published on

ಕೋಟ: ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರ ಹಾಗೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್, ಭಾರತೀಯ ರಕ್ತ ನಿಧಿಸಂಸ್ಥೆ ಆಶ್ರಯದಲ್ಲಿ 249ನೇ ಸ್ವಚ್ಛತಾ ಅಭಿಯಾನ ಹಾಗೂ ರಕ್ತದಾನ ಶಿಬಿರ ಸೋಮವಾರ ಕುಂದಾಪುರದಲ್ಲಿ ನಡೆಯಿತು. ಲಯನ್ಸ್ ಕ್ಲಬ್ ಕುಂದಾಪುರ ಅಮೃತಧಾರದ ಅಧ್ಯಕ್ಷೆ ಡಾ.ವಾಣಿಶ್ರೀ ಐತಾಳ್, ನಿಕಟ ಪೂರ್ವ ಅಧ್ಯಕ್ಷೆ ಆಶಾ ಶಿವರಾಂ ಶೆಟ್ಟಿ, ಸ್ಥಾಪಕ ಅಧ್ಯಕ್ಷರಾದ ಸರಸ್ವತಿ ಪುತ್ರನ್, ಉಪಾಧ್ಯಕ್ಷೆ ಚಂದ್ರಿಕಾ ಧನ್ಯಾ, ಕಲ್ಪನಾ ಭಾಸ್ಕರ್ ಹಾಗೂ ಕ್ಲೀನ್ ಕುಂದಾಪುರ ಪ್ರಾಜೆಕ್ಟ್ ಸದ್ಯಸರು, ರಕ್ತನಿಧಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net