

ಕುಶಾಲನಗರ:
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುಶಾಲನಗರ ಸ್ಥಳೀಯ ಸಂಸ್ಥೆ , ಕುಶಾಲನಗರ ಪುರಸಭೆ ಕರ‍್ಯಾಲಯ ಹಾಗೂ ಕುಶಾಲನಗರ ಫಾತಿಮ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಸಹಯೋಗದೊಂದಿಗೆ ಕುಶಾಲನಗರ ಫಾತಿಮ ಪ್ರೌಢಶಾಲೆಯಲ್ಲಿ ಬುಧವಾರ 155 ನೇ ರ‍್ಷದ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಮತ್ತು ಸ್ವಚ್ಚತಾ ಹೀ ಸೇವಾ ಶ್ರಮದಾನ ಕರ‍್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಫಾತಿಮ ಶಾಲಾವರಣದಲ್ಲಿ ನಡೆದ ಕರ‍್ಯಕ್ರಮದಲ್ಲಿ ಮಹಾತ್ಮ
ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ರ‍್ಪಿಸಿ ಶಾಲಾವರಣದಲ್ಲಿ ಅಮ್ಮನ ಹೆಸರಿನಲ್ಲಿ ಗಿಡನೆಡುವ ಮೂಲಕ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಶಾಲಾ ಆವರಣದಲ್ಲಿ ಗಿಡ ನೆಡುವ ಮೂಲಕ ಸ್ವಚ್ಛತಾ ಶ್ರಮದಾನ ಕರ‍್ಯಕ್ಕೆ ಚಾಲನೆ ನೀಡಿದ ಸ್ಕೌಟ್ಸ್, ಗೈಡ್ಸ್ ನ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಡಾ. ಪ್ರವೀಣ್ ದೇವರಗುಂಡ ಸೋಮಪ್ಪ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯರ‍್ಥಿಗಳು ತಮ್ಮನ್ನು ಸದಾಕಾಲ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ವಿದ್ಯರ‍್ಥಿಗಳ ರ‍್ವತೋಮುಖ ಬೆಳವಣಿಗೆಗೆ ಸ್ಕೌಟ್ ಮತ್ತು ಗೈಡ್ ಸಹಕಾರಿಯಾಗಲಿದೆ.
ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಶ್ರಮದಾನದ ಮೂಲಕ ಸ್ವಚ್ಛತಾ ಕರ‍್ಯ ಕೈಗೊಂಡು ಪರಿಸರವನ್ನು ಸ್ವಚ್ಛಗೊಳಿಸಬೇಕು ಎಂದರು.
ಸ್ವಚ್ಛ ಭಾರತ್ ಮಿಷನ್ ಮತ್ತು ಸ್ವಚ್ಚತಾ ಹೀ ಸೇವಾ ಅಭಿಯಾನದ ಮಹತ್ವ ಕುರಿತು ಮಾಹಿತಿ ನೀಡಿ
ಸ್ವಚ್ಛತೆಯೇ ಸೇವೆ ಕುರಿತು ಪರಿಸರ ಪ್ರತಿಜ್ಞಾ ವಿಧಿ ಬೋಧಿಸಿದ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ಜಿಲ್ಲಾ ಸರ‍್ವಜನಿಕ ಸಂರ‍್ಕಾಧಿಕಾರಿ ಟಿ.ಜಿ. ಪ್ರೇಮಕುಮಾರ್, ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸಿ ಸ್ವಚ್ಛ ಭಾರತ ಅಭಿಯಾನದ ಮೂಲಕ ಸುಂದರ ಹಾಗೂ ಹಸಿರು ಪರಿಸರ ನರ‍್ಮಾಣಕ್ಕೆ ಕೈಜೋಡಿಸಬೇಕು. ಈ ದಿಸೆಯಲ್ಲಿ ವಿದ್ಯರ‍್ಥಿಗಳ ಪಾತ್ರ ಮಹತ್ತರವಾದುದು ಎಂದರು.
ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಎಂ.ಸಿ.ಉದಯಕುಮಾರ್ ಮಾತನಾಡಿ, ಪ್ರತಿಯೊಬ್ಬರೂ ನಗರ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು
ಎಂದು ಮನವಿ ಮಾಡಿದರು.
ಫಾತಿಮ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಜಫ್ರಿ ಡಿ'ಸಿಲ್ವ ಮಾತನಾಡಿ, ವಿದ್ಯರ‍್ಥಿಗಳು ಸ್ವಚ್ಚತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸ್ಥಳೀಯ ಸಂಸ್ಥೆಯ ಕರ‍್ಯಾಧ್ಯಕ್ಷ
ತಮ್ಮಯ್ಯ, ಕರ‍್ಯರ‍್ಶಿ
ಎಂ.ಎಸ್.ಗಣೇಶ್, ಕೋಶಾಧಿಕಾರಿ ನರೇಶ್ ಕುಮಾರ್,
ಲಯನ್ಸ್ ಕ್ಲಬ್ ನ ವಲಯಾಧಿಕಾರಿ ಸುಮನ್ ಬಾಲಚಂದ್ರ, ಲಯನ್ಸ್ ಸಂಸ್ಥೆಯ ಪ್ರಮುಖರಾದ ಕೊಡಗನ ರ‍್ಷ, ಕಿರಣ್, ಸತೀಶ್, ಮನೋಹರ್, ರವಿ, ರಾಜೇಶ್ ಮತ್ತಿತರರು ಇದ್ದರು.