

ಮೈಸೂರು: ನಗರ ಪಾಲಿಕೆ ಹಮ್ಮಿಕೊಂಡಿರುವ ಸ್ವಚ್ಛ ಭಾರತದೆಡೆಗೆ ಮೈಸೂರಿನ ನಡಿಗೆ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಶನಿವಾರ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಆವರಣದಲ್ಲಿ ಚಾಲನೆ ನೀಡಿದರು.
ನಗರದಲ್ಲಿ ಸ್ವಚ್ಚತೆ ಕಾಪಾಡಲು ಹಮ್ಮಿಕೊಂಡಿರುವ ಈ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಪ್ರವಾಸಿ ತಾಣಗಳನ್ನು ಕಸ ಮುಕ್ತಗೊಳಿಸಬೇಕು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಈ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದು ಸಚಿವ ಸೋಮಶೇಖರ್ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಸಕ ಎಲ್. ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಶಿವಕುಮಾರ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್ ಹಾಗೂ ಇತರರು ಇದ್ದರು.